ಬೆಂಗಳೂರು:ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್​ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರತಾಪ್ ಸಿಂಹ್ ನಾಯಕ್, ಮಾಜಿ ಸಚಿವ ಎಂಟಿಬಿ ನಾಗರಾಜ್​, ಆರ್.ಶಂಕರ್ ಹಾಗೂ ಸುನೀಲ್ ವಲ್ಯಾಪುರೆ ಅವರಿಗೆ ಪರಿಷತ್​ ಚುನಾವಣೆ ಟಿಕೆಟ್​ ಘೋಷಣೆಯಾಗಿದೆ.ಇದನ್ನೂ ಓದಿ:ಇದು ಯುದ್ಧ ಮಾಡುವ ಹೊತ್ತಲ್ಲ
ಸುನೀಲ್ ವಲ್ಯಾಪುರೆಗೆ ಪರಿಷತ್ ಟಿಕೆಟ್ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದರು. ಕೊಟ್ಟ ಮಾತಿನಂತೆ ಟಿಕೆಟ್ ಘೋಷಣೆ ಮಾಡುವಲ್ಲಿ ಬಿಎಸ್​ವೈ ಯಶಸ್ವಿಯಾಗಿದ್ದಾರೆ.
ಇನ್ನು ಕಾಂಗ್ರೆಸ್​ನಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಸೋತಿದ್ದ ಎಂಟಿಬಿ ನಾಗರಾಜ್​ ಅವರಿಗೂ ಟಿಕೆಟ್​ ದೊರಕಿದ್ದು, ಜೆಡಿಎಸ್​ನಿಂದ ರಾಜೀನಾಮೆ ನೀಡಿ ಬಿಜೆಪಿ ಸೇರಿ ಉಪ ಚುನಾವಣೆ ಸೋತಿದ್ದ ಎಚ್​.ವಿಶ್ವನಾಥ್​ ಅವರಿಗೆ ಈ ಬಾರಿಯು ಲಕ್​ ಕೈಕೊಟ್ಟಿದೆ.ಇದನ್ನೂ ಓದಿ:ಮಹೇಶ್ ಎದುರು ಕನ್ನಡ ಸ್ಟಾರ್: ​ಪ್ರಿನ್ಸ್ ಜತೆ ನಟಿಸಲಿರುವ ನಟ ಯಾರು?
ಪರಿಷತ್ ಟಿಕೆಟ್ ಘೋಷಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮೇಲುಗೈ ಸಾಧಿಸಿದ್ದು, ಬಿಎಸ್​ವೈ ಹೇಳಿದ ವ್ಯಕ್ತಿಗಳಿಗೆ ಹೈಕಮಾಂಡ್​ ಟಿಕೆಟ್ ನೀಡಿದೆ. ಎಂಟಿಬಿ, ಆರ್.ಶಂಕರ್ ಹಾಗೂ ಸುನೀಲ್ ವಲ್ಯಾಪುರೆ ಬಿಎಸ್​ವೈ ಸೂಚಿಸಿದ ಹೆಸರುಗಳಾಗಿವೆ.(ದಿಗ್ವಿಜಯ ನ್ಯೂಸ್​)
ಚೀನಾ ವಿರುದ್ಧ ಜನಾಂದೋಲನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + eighteen =
Remember me
