ಬೆಂಗಳೂರು:ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಎಲ್ಲಾ ರೀತಿಯ ಸಕಲ-ಸಿದ್ದತೆಗಳನ್ನು ಮಾಡಿಕೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ:ಕರ್ನಾಟಕ, ಹಿಮಾಚಲ ಪ್ರದೇಶ, ಅಸ್ಸಾಂಗೆ ಅತಿ ಹೆಚ್ಚು ಪ್ರಮಾಣದ ನೆರೆ ಪರಿಹಾರ: ಕೇಂದ್ರ ಸರ್ಕಾರ
ಅಧಿಕಾರಿಗಳೊಂದಿಗೆ ಬುಧವಾರ ಪೂರ್ವಸಭೆ ನಡೆಸಿದ ಅವರು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸರಿಯಾಗಿ ಪೂರ್ವಾಭ್ಯಾಸ ಮಾಡಿಕೊಳ್ಳಬೇಕು. ಪೂರ್ವಾಭ್ಯಾಸ ಮಾಡುವ ವೇಳೆ ಅವರಿಗೆ ತಿಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿ ಮಾಡಲು ಸೂಚಿಸಿದರು.
ಫೀಲ್ಡ್​ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆಸನಗಳ ವ್ಯವಸ್ಥೆ, ಯಾವ ದ್ವಾರಗಳಲ್ಲಿ ಯಾರಿಗೆ ಪ್ರವೇಶ ನೀಡಬೇಕು, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಮುನ್ನೆಚ್ಚರಿಕೆ ಹಾಗೂ ಭದ್ರತೆಯ ದೃಷ್ಟಿಯಿಂದ ಮೈದಾನದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಗಳನ್ನು ಅಳವಡಿಸಬೇಕು. ಬ್ಯಾರಿಕೇಡಿಂಗ್ ವ್ಯವಸ್ಥೆ ಸರಿಯಾಗಿದೆಬೇಕು. ಆವರಣ ಹಾಗೂ ಆವರಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡಬೇಕು ಎಂದು ತಿಳಿಸಿದರು.
ಪ್ರಶಂಸಾ ಪತ್ರ ವಿತರಣೆ: ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಅಂಗಾಂಗ ದಾನದ ವಿಶೇಷ ಕಾರ್ಯಕ್ಕಾಗಿ 80 ಮಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳು ಸನ್ಮಾನಿಸಿ ಪ್ರಂಶಂಸಾ ಪತ್ರ ನೀಡಲಿದ್ದಾರೆ. ಅದಕ್ಕೆ ಬೇಕಾದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ವೇಳೆ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ, ರಮ್ಯಾ, ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ದನಾಯಂದ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ವಲಯ ಜಂಟಿ ಆಯುಕ್ತರು, ಬಿಬಿಎಂಪಿ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಜಲಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಎಂ ರಾಜೀನಾಮೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಬೇಕು: ಮಧು ಬಂಗಾರಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 10 =
Remember me
