ಹೊಸಕೋಟೆ:ತಾಲೂಕಿನ ನೆಲವಾಗಿಲು ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ಸಂಜೆ ವಿದ್ಯಾರ್ಥಿಗಳು ಮೊಟ್ಟೆ ತಿಂದು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ನೆಲವಾಗಿಲಿನ ದೇವರಾಜ್ ಅರಸ್ ಹಿಂದುಳಿದ ವರ್ಗಗಳ ವಸತಿ ಶಾಲೆಯಲ್ಲಿ ಸುಮಾರು 27 ಹಿಂದುಳಿದ ವಿದ್ಯಾರ್ಥಿಗಳು ನೆಲೆಸಿದ್ದು, ಸಂಜೆ 10ನೇ ತರಗತಿಯ ಮಕ್ಕಳು ಮೊಟ್ಟೆ ತಿಂದಿದ್ದಾರೆ. ಕೂಡಲೇ ಅವರಿಗೆ ವಾಂತಿ ಹಾಗೂ ಇನ್ನಿತರ ಹೊಟ್ಟೆ ಸಮಸ್ಯೆಗೆ ತುತ್ತಾಗಿದ್ದಾರೆ. ನಂತರ ವಸತಿ ನಿಲಯದ ಸಿಬ್ಬಂದಿ ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಈ ಬಗ್ಗೆ ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕು ಅಧಿಕಾರಿ ಡಾ. ಪ್ರೀತಿ ರವರು ಮಾಧ್ಯಮದವರಿಗೆ ಹಾಗೂ ಪೊಲೀಸರಿಗೆ ಮತ್ತು ಸಂಬಂಧಿಗಳಿಗೆ ಮಾಹಿತಿ ನೀಡಲು ನಿರಾಕರಿಸಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ ನಡೆಸಿದ್ದಾರೆ ಎಂಬ ದೂರುಗಳು ಬಂದಿದ್ದು, ಈ ಬಗ್ಗೆ ಮೇಲಾಧಿಕಾರಿಗಳು ಕ್ರಮವಹಿಸಲು ಸಾರ್ವಜನಿಕ ವಲಯದಲ್ಲಿ ಒತ್ತಾಯ ಮಾಡಲಾಗಿದೆ.
8 ಮಕ್ಕಳು ಹೊಟ್ಟೆ ಸಮಸ್ಯೆಯಿಂದ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ  ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಚೇತರಿಕೆ ಕಂಡುಬರುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + eighteen =
Remember me
