ಬೆಂಗಳೂರು :ಹವಾಮಾನ ಬದಲಾವಣೆಯಿಂದ ಶೀತ ಸಂಬಂಧಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದ್ದು, ಇದೇ ವೇಳೆ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆ ಕಂಡು ಬಂದಿದೆ. ಶುಕ್ರವಾರ ಹೊಸದಾಗಿ 328 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕು ಪ್ರಮಾಣ ದರ ಶೇ. 4.55 ತಲುಪಿದೆ.
ಕಳೆದ 24 ಗಂಟೆಗಳಲ್ಲಿ 7,205 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 163, ಮೈಸೂರು 26, ಬೆಂಗಳೂರು ಗ್ರಾಮಾಂತರ 18, ತುಮಕೂರು 15, ಹಾಸನ 12, ಚಿಕ್ಕಬಳ್ಳಾಪುರ 10 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ವಿಜಯಪುರ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ 1,159 ಸಕ್ರಿಯ ಪ್ರಕರಣಗಳಿದ್ದು, 1,087 ಸೋಂಕಿತರು ಮನೆ ಆರೈಕೆಯಲ್ಲಿದ್ದಾರೆ. 72 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇವರಲ್ಲಿ 51 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ, 9 ಮಂದಿ ಆಕ್ಸಿಜನ್ ಬೆಡ್‌ನಲ್ಲಿ, 9 ಮಂದಿ ತುರ್ತು ನಿಗಾ ಘಟಕದಲ್ಲಿ ಹಾಗೂ ಮೂವರು ಐಸಿಯುನ ವೆಂಟಿಲೇಟರ್ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
