ಶಿವಮೊಗ್ಗ:ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ಆಗಿರುವ ಘಟನೆ ಬುಧವಾರ ತಡರಾತ್ರಿ ಬೆಳಕಿಗೆ ಬಂದಿದೆ. ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ವೆಬ್ ಸೈಟ್ ಅನ್ನು ಹ್ಯಾಕರ್ಸ್ ಗಳು ಹ್ಯಾಕ್ ಮಾಡಿದ್ದಾರೆ.
ಈ ಕೃತ್ಯವನ್ನು ಪ್ರೋ ಪ್ಯಾಲೆಸ್ಟೈನ್ ಎಸಗಿದೆ ಎನ್ನಲಾಗಿದೆ. ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ವೆಬ್​​ಸೈಟ್ ಹ್ಯಾಕ್ ಮಾಡಿದ್ದು, ಸೇವ್ ಪ್ಯಾಲಸ್ಟೈನ್-ಇಸ್ರೇಲ್ ಡಾಗ್ ಎಂದು ವೆಬ್ ಸೈಟ್ ನಲ್ಲಿ ಉಲ್ಲೇಖ ಮಾಡಲಾಗಿದೆ.
ವೆಬ್ ಸೈಟ್ ಹ್ಯಾಕ್ ಆದ ಬಳಿಕ ವಿವಿ ತಾಂತ್ರಿಕ ತಂಡ ವೆಬ್ ಸೈಟ್ ಸ್ಥಗಿತಗೊಳಿಸಿದೆ. ವಿವಿ ವೆಬ್ ಸೈಟ್ ಹ್ಯಾಕ್ ಆಗಿರುವ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ತನಿಖೆಯ ನಂತರವಷ್ಟೇ ಈ ಹ್ಯಾಕ್ ಮಾಡಿರುವವರ ಹೆಚ್ಚಿನ ವಿಷಯ ತಿಳಿಯಲಿದೆ. ಈ ಹಿಂದೆಯೂ ವೆಬ್ ಸೈಟ್ ಹ್ಯಾಕ್ ಮಾಡಿದ್ದ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಜೊತೆಗೆ ಸೆಕ್ಯುರಿಟಿ ಈಸ್ ಜಸ್ಟ್ ಫ್ಯಾಂಟಸಿ ಎಂಬ ಘೋಷಣೆ ಹಾಕಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 + two =
Remember me
