ಬೆಂಗಳೂರು:ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಸ್ಥಗಿತಗೊಂಡ ಪರಿಣಾಮ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲು ಜಾರಿಗೆ ತರಲಾಗಿದ್ದ ‘ವಿದ್ಯಾಗಮ’ ಯೋಜನೆಯನ್ನು ಪುನರಾರಂಭಿಸಬಹುದೇ ಎಂಬ ಬಗ್ಗೆ 10 ದಿನಗಳ ಒಳಗೆ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಆನ್‌ಲೈನ್ ಶಿಕ್ಷಣಕ್ಕೆ ಅನುಕೂಲವಾಗುವಂತೆ ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಇನ್ನಿತರ ಡಿಜಿಟಲ್ ಉಪಕರಣಗಳನ್ನು ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ಎ.ಎ. ಸಂಜೀವ್ ನರೇನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನಿಡಿತು.
ವಿಚಾರಣೆ ವೇಳೆ ವಾದ ಮಂಡಿಸಿದ ಸರ್ಕಾರದ ಪರ ವಕೀಲರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಪರಿಣಾಮ ಸರ್ಕಾರದ ಖಜಾನೆ ಈಗಾಗಲೇ ಖಾಲಿಯಾಗಿದೆ. ಆದ್ದರಿಂದ, ಅರ್ಜಿದಾರರ ಕೋರಿಕೆಯಂತೆ ಮೊಬೈಲ್, ಲ್ಯಾಪ್‌ಟಾಪ್, ಇಂಟರ್‌ನೆಟ್ ಸೇರಿದಂತೆ ಅಗತ್ಯ ತಾಂತ್ರಿಕ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಿಲ್ಲ. ಕರೊನಾ ಸೋಂಕು ಹೆಚ್ಚಾದ ಕಾರಣ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಲಾಗಿದ್ದು, ಚಂದನ ವಾಹಿನಿ ಮೂಲಕ 5 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣ ನೀಡಲಾಗುತ್ತಿದೆ ಎಂದು ಕೋರ್ಟ್‌ಗೆ ತಿಳಿಸಿದರು.
ಅದನ್ನು ದಾಖಲಿಸಿಕೊಂಡ ಪೀಠ, ಆರ್ಥಿಕ ಸಮಸ್ಯೆಯಿಂದ ವಿದ್ಯಾರ್ಥಿಗಳ ಆನ್‌ಲೈನ್ ಶಿಕ್ಷಣಕ್ಕೆ ಅಗತ್ಯವಿರುವ ತಾಂತ್ರಿಕ ಸೌಲಭ್ಯ ಕಲ್ಪಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಇಂಥ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿಯ ಅಧ್ಯಯನ ನಡೆಸಿ, ಬಡ ವಿದ್ಯಾರ್ಥಿಗಳಿಗೆ ಅದರಲ್ಲೂ ಗ್ರಾಮೀಣ ಭಾಗದ ಮಕ್ಕಳಿಗೆ ವಿದ್ಯಾಗಮ ಯೋಜನೆಯನ್ನು ಪುನರಾರಂಭಿಸಲು ಸಾಧ್ಯವೇ ಎಂಬ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಂಡು ತಿಳಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಡಿ.17ಕ್ಕೆ ಮುಂದೂಡಿತು.
ಸಿಎಸ್‌ಆರ್ ನಿಧಿ ಸಂಗ್ರಹಣೆಗೆ ಸಲಹೆ:ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳನ್ನು ವಿತರಿಸಲು ಅನುಕೂಲವಾಗುವಂತೆ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಮೂಲಕ ಕಾರ್ಪೊರೇಟ್ ಕಂಪನಿಗಳಿಂದ ಸರ್ಕಾರ ಹಣ ಸಂಗ್ರಹಿಸಬಹುದು. ಕೋವಿಡ್ ನಿರ್ವಹಣೆಗಾಗಿ ಸರ್ಕಾರದ ಬೊಕ್ಕಸದಿಂದ ಹೆಚ್ಚು ಹಣ ವೆಚ್ಚವಾಗಿದೆ ಎಂಬ ಸರ್ಕಾರದ ಹೇಳಿಕೆ ಪರಿಗಣಿಸಿ ಈ ನಿರ್ದೇಶನ ನೀಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − six =
Remember me
