ಬೆಂಗಳೂರು:ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಜೆಡಿಎಸ್ ಈಗ ತನ್ನ ಪಕ್ಷದ ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳಲು ಪಕ್ಷ ಸಂಘಟನಾ ಪ್ರವಾಸಕ್ಕೆ ಮುಂದಾಗಿದೆ.ಅನೇಕ ಕಡೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ಸದಸ್ಯರು ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ.
ಎಮ್ಮೆಮಾಡು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆಲುವು ಸಾಧಿಸಿದ್ದ ಸದಸ್ಯರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಅದೇ ರೀತಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲೂ ಇದೇ ರೀತಿ ಪಕ್ಷಾಂತರ ಪರ್ವ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜೆಡಿಎಸ್‌ಗೆ ಎದುರಾಗಿದೆ.
ಕಾಂಗ್ರೆಸ್ ಸರ್ಕಾರ ಇನ್ನೂ ನಾಲ್ಕುಮುಕ್ಕಾಲು ವರ್ಷ ಅಧಿಕಾರದಲ್ಲಿರುವುದರಿಂದ ಕಾರ್ಯಕರ್ತರು ಸಹಜವಾಗಿಯೇ ಕಾಂಗ್ರೆಸ್‌ನತ್ತ ಮುಖ ಮಾಡುತ್ತಾರೆ. ಅಷ್ಟೇ ಅಲ್ಲ, ಕಾಂಗ್ರೆಸ್ ಕೂಡ ಕೆಲವು ಕಡೆ ಜೆಡಿಎಸ್ ನಾಯಕರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದೆ. ಹೀಗಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ 20 ತಂಡಗಳನ್ನು ರಚಿಸಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷದಲ್ಲಿ ಪುನಃಶ್ಚೇತನ ಮಾಡುವ ಕೆಲಸವನ್ನು ಕೈಗೆತ್ತಿಕೊಂಡಿದೆ.ಆ.15 ಬಳಿಕ ಕೋರ್ ಕಮಿಟಿ ಸಭೆಯಲ್ಲಿ ಯಾವ ಯಾವ ನಾಯಕರನ್ನು ಪಕ್ಷ ಸಂಘಟನಾ ಪ್ರವಾಸದಲ್ಲಿ ತೊಡಗಿಸಿಕೊಳ್ಳಬೇಕು. ಯಾರಿಗೆ ಯಾವ ಜವಾಗಬ್ದಾರಿ ನೀಡಬೇಕು ಎಂಬುದನ್ನು ತೀರ್ಮಾನಿಸಲಾಗುತ್ತದೆ.
ವಿವಿಧ ಘಟಕಗಳ ಮುಖ್ಯಸ್ಥರ ಬದಲಾವಣೆಪಕ್ಷ ಸಂಘಟನೆಗೆ ವಿವಿಧ ಘಟಕಗಳು ಕಾರ್ಯಪ್ರವೃತ್ತರಾಗುವುದು ಬಹುಮುಖ್ಯ. ಆದರೆ, ಅನೇಕ ಘಟಕಗಳು ಚೈತನ್ಯ ಕಳೆದುಕೊಂಡಿವೆ. ಘಟಕಗಳ ಮುಖ್ಯಸ್ಥರು ಚುನಾವಣೆ ಬಳಿಕ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಾಗಿ ಅಂತಹ ಘಟಕಗಳನ್ನು ವಿಸರ್ಜನೆ ಮಾಡುವ ಬದಲು ಅವುಗಳ ಮುಖ್ಯಸ್ಥರನ್ನು ಬದಲಿಸಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳಾ ಘಟಕ ಸೇರಿದಂತೆ ವಿವಿಧ ಘಟಕಗಳ ತಲೆ ಬದಲಾಗಲಿವೆ ಎನ್ನಲಾಗಿದೆ.
ಅಲ್ಲಲ್ಲಿ ಸಮಾವೇಶ ಆಯೋಜನೆಜೆಡಿಎಸ್ ಪಕ್ಷ ಸಂಘಟನಾ ಪ್ರವಾಸದ ಸಂದರ್ಭದಲ್ಲಿ ಅಲ್ಲಲ್ಲಿ ಸಮಾವೇಶ ನಡೆಸಲೂ ಆಲೋಚಿಸಲಾಗಿದೆ. ಕೆಲವು ಸಮಾವೇಶಗಳಲ್ಲಿ ಖುದ್ದು ದೇವೇಗೌಡರೇ ಭಾಗವಹಿಸಿ ಕಾರ್ಯಕರ್ತರಿಗೆ ಮಾರ್ಗದರ್ಶನ ಮಾಡಲಿದ್ದಾರೆ. ಉಳಿದ ಕಡೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೆ ಕೆಲವು ಕಡೆ ಪಕ್ಷದ ಹಿರಿಯ ನಾಯಕರು ಪ್ರವಾಸದ ನೇತೃತ್ವ ವಹಿಸಿಕೊಳ್ಳಲಿದ್ದಾರೆ.
‘ಲೋಕ’ ಚುನಾವಣೆಗೆ ಪಕ್ಷ ಬಲವರ್ಧನೆಲೋಕಸಭೆ ಚುನಾವಣೆಯೂ ಮುಂದಿರುವ ಹಿನ್ನೆಲೆಯಲ್ಲಿ ಈ ಪಕ್ಷ ಸಂಘಟನಾ ಪ್ರವಾಸ ಮತ್ತಷ್ಟು ಮಹತ್ವ ಪಡೆದುಕೊಳ್ಳಲಿದೆ. ಕಾಂಗ್ರೆಸ್ ಪಕ್ಷದ ವೈಲ್ಯಗಳನ್ನು ಜನರ ಮುಂದಿಡುವ ಮತ್ತು ಗ್ಯಾರಂಟಿಗಳ ಅನುಷ್ಠಾನದ ಓರೆಕೋರೆಗಳನ್ನು ತಿಳಿಸುವ ಕೆಲಸವನ್ನೂ ನಾಯಕರು ಈ ಸಂದರ್ಭದಲ್ಲಿ ಮಾಡಲಿದ್ದಾರೆ.
ಪಕ್ಷದ ಕೋರ್ ಕಮಿಟಿ ಸಭೆ ಶೀಘ್ರದಲ್ಲೇ ನಡೆದಿಸಿ ಪ್ರವಾಸದ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ. ಕುಮಾರಸ್ವಾಮಿ ಕಾಂಬೋಡಿಯಾ ಪ್ರವಾಸದಿಂದ ಶನಿವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + ten =
Remember me
