ಬೆಂಗಳೂರು:ರಾಜ್ಯ ಸರ್ಕಾರ ಮೂರು ತಿಂಗಳ ಗಡುವಿನೊಳಗೆ ಸಾರಿಗೆ ನೌಕರರ ಒಂಬತ್ತು ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಕುರಿತಂತೆ ಕೂಟವು ಮುಖ್ಯಮಂತ್ರಿ, ಸಾರಿಗೆ ಸಚಿವ, ರಸ್ತೆ ಸಾರಿಗೆಯ ನಾಲ್ಕು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆ ಆಯುಕ್ತರಿಗೆ ಮಂಗಳವಾರ ಮುಷ್ಕರದ ನೋಟಿಸ್ ನೀಡಿದೆ. ಕಾರ್ಮಿಕ ಕಾಯ್ದೆ ನಿಯಮದ ಪ್ರಕಾರ ನೋಟಿಸ್ ನೀಡಿದ 22 ದಿನದೊಳಗೆ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ, ರಾಜ್ಯದ ನಾಲ್ಕು ನಿಗಮಗಳ ಸಾರಿಗೆ ನೌಕರರು ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಆರನೇ ವೇತನ ಆಯೋಗದ ಶಿಫಾರಸಿನ ಪ್ರಕಾರ ವೇತನ ಪರಿಷ್ಕರಣೆ ಸೇರಿ 10 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಡಿಸೆಂಬರ್ 11ರಿಂದ 14ರ ವರೆಗೆ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಆಗ ರಾಜ್ಯ ಸರ್ಕಾರ ಒಂಬತ್ತು ಬೇಡಿಕೆ ಈಡೇರಿಸುವ ಲಿಖಿತ ಭರವಸೆ ನೀಡಿತ್ತು. ಈ ವೇಳೆ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮೂರು ತಿಂಗಳ (ಮಾ.15ರ ವರೆಗೆ) ಗಡುವು ನೀಡಲಾಗಿತ್ತು. ಗಡುವು ಮುಗಿದರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಮುಷ್ಕರ ನೋಟಿಸ್ ನೀಡಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ಸಾರಿಗೆ ನೌಕರರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸರ್ಕಾರ ಮಾಧ್ಯಮಗಳ ಮುಂದೆ ತಿಳಿಸುತ್ತಿದೆ. ಈ ಭರವಸೆಗಳಿಂದ ನೌಕರರಿಗೆ ಅನುಕೂಲಕ್ಕಿಂತ ಅನನುಕೂಲಗಳೇ ಹೆಚ್ಚಿವೆ. ಈ ಭರವಸೆ ಸಮಯದಲ್ಲಿ ಸಂಘಟನೆಯೊಂದಿಗೆ ಒಮ್ಮೆಯೂ ಚರ್ಚಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ನಿರ್ಧಾರಗಳಿಗೆ ನೌಕರರ ಸಮ್ಮತಿ ಇಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಮುಷ್ಕರ ಅನಿವಾರ್ಯವಾಗಿದೆ ಎಂದು ಹೇಳಿದರು.
‘ಹಾಗೆಲ್ಲ ಮಾತಾಡ್ಬೇಡಿ, ಯಾರಾದ್ರೂ ಸಿ.ಡಿ. ಮಾಡಿ ಬಿಟ್ಟಾರು’; ಜಿಲ್ಲಾಧಿಕಾರಿಗಳ ಜತೆ ಹಳ್ಳಿಯಲ್ಲಿ ಮಲಗುತ್ತೇವೆ ಎಂದವರಿಗೆ ಕಿವಿಮಾತು

ಗಂಡ ಮಾರ್ಕೆಟ್​ನಲ್ಲಿ ಬೇರೆ ಹೆಂಗಸಿನ ಜತೆಗಿದ್ದ; ಅದನ್ನು ಕಂಡ ಹೆಂಡತಿ ಬೀದಿರಂಪ ಮಾಡಿದ್ಲು; ಮದ್ವೆಯಾಗಿ ಒಂದೇ ವರ್ಷಕ್ಕೆ ಹೀಗೆಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
