ಬೆಂಗಳೂರು:ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಮಾತ್ರ ದೂರ ಶಿಕ್ಷಣ ನೀಡುವ ನಿರ್ಬಂಧ, ಬೆಂಗಳೂರು ಕೇಂದ್ರ ವಿವಿ ಹೆಸರು ಬದಲಾವಣೆ ಸೇರಿ ಉನ್ನತ ಶಿಕ್ಷಣ ಸುಧಾರಣೆಗೆ ಸಂಬಂಧಿಸಿದ ಮಹತ್ವದ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ. ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಾಜ್ಯ ವಿಶ್ವವಿದ್ಯಾಲಯಗಳ ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ-2020 ಮಂಡಿಸಿದರು. ಪ್ರತಿಪಕ್ಷಗಳ ಗಲಾಟೆ, ಗದ್ದಲದ ನಡುವೆ ಯಾವುದೇ ಚರ್ಚೆ ಇಲ್ಲದೆ ವಿಧೇಯಕ ಅಂಗೀಕಾರವಾಯಿತು.
ಈ ಹಿಂದೆಯೇ ಸುಗ್ರೀವಾಜ್ಞೆ ಜಾರಿಗೆ ತರುವ ಮೂಲಕ ಮಸೂದೆಯಲ್ಲಿದ್ದ ಪ್ರಸ್ತಾಪಿಸಲಾಗಿರುವ ಬಹುತೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಮಹಾರಾಣಿ ಕ್ಲಸ್ಟರ್, ರಾಯಚೂರು, ಬೆಂಗಳೂರು-ಮಂಡ್ಯ ಏಕೀಕೃತ ವಿವಿಗಳಿಗೆ ಕುಲಪತಿಗಳನ್ನು ನೇಮಕ ಮಾಡಲಾಗಿತ್ತು. ಆದರೆ, ಈ ವಿವಿಗಳಿಗೆ ಕುಲಸಚಿವರು ಹಾಗೂ ಆಡಳಿತಾಧಿಕಾರಿಗಳನ್ನು ಸರ್ಕಾರ ನೇಮಕ ಮಾಡಬೇಕಿದೆ. ಉನ್ನತ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಇನ್ನು ಮುಂದೆ ಹೆಚ್ಚು ಶಕ್ತಿ ಬರಲಿದೆ ಎಂದು ಡಿಸಿಎಂ ತಿಳಿಸಿದರು.
ಮಸೂದೆಯ ಪ್ರಮುಖ ಅಂಶಗಳು* ಈ ಮೊದಲು ದೂರ ಶಿಕ್ಷಣವು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿಯೂ ಲಭ್ಯವಿತ್ತು. ಇನ್ನುಮುಂದೆ ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿವಿ ವತಿಯಿಂದ ಮಾತ್ರ ನೀಡಿಕೆ.* ಬೆಂಗಳೂರಿನಲ್ಲಿ ಕೇಂದ್ರ ಸ್ಥಾನ ಹೊಂದಿರುವ ಸರ್ಕಾರಿ ವಿಜ್ಞಾನ ಕಾಲೇಜು ಸಂಸ್ಥೆಯನ್ನು ಬೆಂಗಳೂರು ವಿವಿಯಿಂದ ಪ್ರತ್ಯೇಕಗೊಳಿಸಿ ಏಕಾತ್ಮಕ ಸ್ವರೂಪದ ನೃಪತುಂಗಾ ವಿವಿ ಸ್ಥಾಪಿಸಲಾಗುತ್ತಿದ್ದು, ಇದರ ಕೇಂದ್ರ ಸ್ಥಾನವು ಬೆಂಗಳೂರು ನಗರದಲ್ಲೇ ಇರಲಿದೆ.* ಗುಣಮಟ್ಟದ ಶಿಕ್ಷಣ ಹಾಗೂ ಸಂಪನ್ಮೂಲ ಕೊರತೆ ಆಗದಂತೆ ಎಲ್ಲ ವಿವಿಗಳಿಗೆ ಆದಾಯ ತರಿಗೆ ವಿನಾಯಿತಿ ಪ್ರಯೋಜನಗಳನ್ನು ಪಡೆದುಕೊಳ್ಳಲು ಅವಕಾಶ.* ಎಲ್ಲ ವಿವಿಗಳಿಗೆ ಆಡಳಿತಾಧಿಕಾರಿ ಅಥವಾ ಕುಲಸಚಿವರನ್ನಾಗಿ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಲು ಅವಕಾಶ.* ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಹೆಸರನ್ನು ಬೆಂಗಳೂರು ನಗರ ವಿವಿ ಎಂದು ಮರು ನಾಮಕರಣ.* ವಿವಿಗಳಲ್ಲಿ ಕೆಲಸ ಮಾಡುವ ಲೆಕ್ಕಪತ್ರ ನಿಯಂತ್ರಕರ ಪದನಾಮವನ್ನು ಪ್ರಧಾನ ನಿರ್ದೇಶಕರು, ಕರ್ನಾಟಕ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಎಂದು ಬದಲು
35 ಲಕ್ಷ ರೂ. ವರೆಗಿನ ಫ್ಲ್ಯಾಟ್ ಖರೀದಿ ಮುದ್ರಾಂಕ ಶುಲ್ಕ ಶೇ. 2-3ರಷ್ಟು ಇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 15 =
Remember me
