ಬೆಂಗಳೂರು: ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್​ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿ ಜತೆ ವಿಡಿಯೋ ಸಂವಾದ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಪ್ರಕಟಿಸಿದರು.
ನಾಳೆಯಿಂದ ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್​ಗಳು ಕರೊನಾ ವೈರಸ್​ ಸೋಂಕು ಇಲ್ಲದ ಇತರೆ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು. ಕೋವಿಡ್​-19 ರೋಗಿಗಳಿಗಾಗಿ ಖಾಸಗಿ ಆಸ್ಪತ್ರೆಗಳು ಪ್ರತ್ಯೇಕ ವಾರ್ಡ್​ ತೆರೆಯಬೇಕು. ಸೋಂಕು ಹರಡಿರುವುದು ಪತ್ತೆಯಾದರೆ ಅವರನ್ನು ಪ್ರತ್ಯೇಕ ವಾರ್ಡ್​ನಲ್ಲಿ ಇರಿಸಿ ನಂತರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಬೇಕು. ಸೋಂಕು ಹರಡಿರುವವರು ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್​ಗಳಿಗೆ ಬಂದರೆ ಅವುಗಳನ್ನು ಸೀಲ್​ಡೌನ್​ ಮಾಡದೆ ಇಡೀ ಆಸ್ಪತ್ರೆಯನ್ನು ಸೋಂಕು ನಿವಾರಕ ಬಳಸಿ ಸ್ವಚ್ಛಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ಇದನ್ನೂ ಓದಿVIDEO| ಕರೊನಾ ವೈರಸ್​ ಹಾವಳಿಯಿಂದ ರಕ್ಷಣೆ ಪಡೆಯುವ ಸಂದೇಶ ಹೊತ್ತ ಸ್ಯಾಂಡ್​ ವೈಪರ್​ ದೃಶ್ಯ ವೈರಲ್​
ಮನೆಯಲ್ಲಿ ಕ್ವಾರಂಟೈನ್​: ಕರೊನಾ ಸೋಂಕು ತಗುಲಿದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆ ವೈದ್ಯರನ್ನು ಮನೆಯಲ್ಲೇ ಕ್ವಾರಂಟೈನ್​ನಲ್ಲಿ ಇಡಲಾಗುವುದು. ಗರ್ಭಿಣಿಯರು ಕಂಟೈನ್ ಮೆಂಟ್ ಝೋನ್ ನಿಂದ ಬಂದರೆ ಮಾತ್ರ ಅವರನ್ನು ಕೋವಿಡ್​ ತಪಾಸಣೆ ಮಾಡಬೇಕು. ಇಲ್ಲದಿದ್ದರೆ ಅವರನ್ನು ತಪಾಸಣೆಗೆ ಒಳಪಡಿಸುವ ಅಗತ್ಯ ಇಲ್ಲ ಎಂದು ಸಚಿವರು ಮಾಹಿತಿ ನೀಡಿದರು.
ಸಚಿವರ ಮನವಿಗೆ ಸ್ಪಂದಿಸಿದ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ ನಾಳೆಯಿಂದ ಸೇವೆ ನೀಡುವುದಾಗಿ ಒಪ್ಪಿಗೆ ನೀಡಿವೆ. ಅಲ್ಲದೆ ಮುಂದಿನ ದಿನಗಳಲ್ಲಿ ಕರೊನಾ ವೈರಸ್​ ಸೋಂಕು ತೀವ್ರಗೊಂಡರೆ ಸರ್ಕಾರದ ಜತೆ ಕೈಜೋಡಿಸುವುದಾಗಿ ಖಾಸಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಜುಲೈ 30, 31 ರಂದು ಸಿಇಟಿ, ಸೆಪ್ಟೆಂಬರ್​ 1ರಂದು ಕಾಲೇಜು ಆರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 20 =
Remember me
