ಬೆಂಗಳೂರು:ಯಾವುದೇ ಪ್ರಕರಣ ತನಿಖೆ ಹಂತದಲ್ಲಿರುವಾಗ ಅಪರಾಧಿ ಸ್ಥಾನದಲ್ಲಿರುವವರ ಹೇಳಿಕೆ ಸಹಜ. ಈ ವಿಷಯದಲ್ಲಿ ಮುಂದೇನು ಮಾಡಬೇಕು ಎಂದು ತನಿಖಾ ತಂಡ ನಿರ್ಧರಿಸುತ್ತದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಆರೋಪವು ಸಚಿವ ಶರಣಪ್ರಕಾಶ್ ಪಾಟೀಲರಿಗೂ ಸುತ್ತಿಕೊಂಡ ಬಗ್ಗೆ ನಾನೇನೂ ಹೇಳುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿರಾಕರಿಸಿದರು.
ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಹಗರಣದ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿರುವಾಗ ವ್ಯಾಖ್ಯಾನಿಸುವುದು ಸರಿಯಲ್ಲ. ಆರೋಪಗಳ ಬಗ್ಗೆ ತನಿಖಾ ತಂಡ ಪರಿಶೀಲಿಸಿ, ಅಗತ್ಯವೆನಿಸಿದವರನ್ನು ವಿಚಾರಣೆಗೆ ಕರೆಯುತ್ತಾರೆ ಎಂದು ಹೇಳಿದರು.
ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಕುರಿತು ಸರ್ಕಾರಕ್ಕೆ ಸಿಬಿಐನಿಂದ ಯಾವುದೇ ಪತ್ರ ಬಂದಿಲ್ಲ. ಜೂ.13ರ ಸಚಿವ ಸಂಪುಟ ಸಭೆಯಲ್ಲಿ ತನಿಖೆ ಸಿಬಿಐಗೆ ಒಪ್ಪಿಸುವ ಬಗ್ಗೆ ಚರ್ಚೆಯಾಗಲಿದೆ ಎನ್ನುವುದೂ ಗೊತ್ತಿಲ್ಲ. ಸಚಿವ ಸಂಪುಟ ಸಭೆಯ ಕಾರ್ಯಸೂಚಿಯನ್ನು ಮುಖ್ಯಮಂತ್ರಿ ನಿಗದಿ ಮಾಡುತ್ತಾರೆ ಎಂದು ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ರಾಹುಲ್ ಗಾಂಧಿ ಸಮಕ್ಷಮ ಶುಕ್ರವಾರ ನಡೆದ ಸಭೆಯಲ್ಲಿ ಲೋಕಸಭೆ ಚುನಾವಣೆ ಕುರಿತು ಚರ್ಚೆಯಾಗಿದೆ. ಯಾವ್ಯಾವ ಜಿಲ್ಲೆಯಲ್ಲಿ ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಲು ತಿಳಿಸಿದ್ದಾರೆ. ರಾಹುಲ್ ಗಾಂಧಿಯವರು ನೀಡಿದ ಸೂಚನೆಗೆ ಬದ್ಧರಾಗಿ ವಿಶ್ಲೇಷಣೆ ಮಾಡುತ್ತೇವೆ ಎಂದು ಹೇಳಿದರು.
ರಾಹುಲ್ ಗಾಂಧಿಯವರು ಲೋಕಸಭೆ ಪ್ರತಿಪಕ್ಷ ನಾಯಕರಾಗಲಿ ಎಂಬುದು ನಮ್ಮೆಲ್ಲರ ಆಸೆ. ಭಾರತ್ ಜೋಡೋ ಮೂಲಕ ದೇಶಾದ್ಯಂತ ಪಾದಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಸಮಸ್ಯೆಗಳನ್ನು ಅರಿತಿದ್ದು, ಪ್ರತಿಪಕ್ಷ ನಾಯಕರಾಗುವುದಕ್ಕೆ ಸೂಕ್ತ. ಆದರೆ ಈ ವಿಷಯದಲ್ಲಿ ಇಂಡಿಯಾ ಒಕ್ಕೂಟದ ತೀರ್ಮಾನವೇ ಅಂತಿಮವೆಂದು ಡಾ.ಜಿ.ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 8 =
Remember me
