ಬೆಂಗಳೂರು:ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಬುಧವಾರವೂ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಏ.21ರಿಂದ ಏ.24ರ ವರೆಗೆ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರಕನ್ನಡದಲ್ಲಿ ಏ.22ರಿಂದ ಏ.24ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಮುಂದಿನ 72 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದ್ದು, ಏ.14ರಿಂದ ಏ.20ರವರೆಗೆ ವಾಡಿಕೆಯಂತೆ 8 ಮಿಮೀ ಮಳೆ ಬದಲಾಗಿ 28 ಮಿಮೀ ಸುರಿದಿದ್ದು, ಶೇ.243 ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡು, ಮಲೆನಾಡು. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ವರ್ಷಧಾರೆಯಾಗಿದೆ.
ಇಪ್ಪತ್ತರ ಯುವತಿಯ ಹುಡುಕಾಟದಲ್ಲಿ ‘ರಾಮಾ ರಾಮಾ ರೇ’ ಸತ್ಯ!
Sign in to your account
Please enter an answer in digits:2 × three =
Remember me
