ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ ಪೆಹಲಾ ಓಟ್ ಮೊದಲ ಮತ ಅಭಿಯಾನಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಚಾಲನೆ ನೀಡಿದರು.
ಸಹಕಾರ ನಗರದ ತಮ್ಮ ಕಚೇರಿಯಲ್ಲಿ ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿದರು. 18 ರಿಂದ 23 ವಯಸ್ಸಿನ ಮೊದಲ ಬಾರಿಗೆ ಲೋಕಸಭೆಯಲ್ಲಿ ಮತದಾನ ಮಾಡುತ್ತಿರುವವರನ್ನು ಸೆಳೆಯಲು ಈ ಅಭಿಯಾನ ಆಯೋಜಿಸಲಾಗಿದೆ.
ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ, ಯುವ ಸಮೂಹ ದೇಶದ ಯುವ ಶಕ್ತಿಯಾಗಿದ್ದು, ಮೊದಲ ಮತ ಅಭಿಯಾನ ಯುವ ಜನಾಂಗದ ಆಂದೋಲನವಾಗಲಿದೆ. ಅಭಿಯಾನದಲ್ಲಿ ಸಂವಾದ, ತಂತ್ರಜ್ಞಾನ ಆಧಾರಿತ ಪ್ರಚಾರ, ಕ್ಯೂ.ಆರ್. ಕೋಡ್ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದರು.
ಸರಕು ಸಾಗಾಣೆ ವಾಹನಗಳಲ್ಲಿ ಎಲ್ಇಡಿ ವ್ಯವಸ್ಥೆ, ಶಾಲಾ ಕಾಲೇಜುಗಳು, ಟ್ಯೂಷನ್ ತಾಣಗಳು, ಬಸ್ ನಿಲ್ದಾಣಗಳು, ಮಾಲ್ ಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯೋಜಿಸಿದ್ದ ಯುವ ಮತ ಅಭಿಯಾನಕ್ಕೆ ಅಭೂಪೂರ್ವ ಸ್ಪಂದನೆ ದೊರೆತಿದ್ದು, ಕಾಂಗ್ರೆಸ್ ಪಕ್ಷ ಶೇ.42ರಷ್ಟು ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಈ ಸಫಲತೆಯ ನಂತರ ಇದೀಗ ಪೆಹಲಾ ಓಟ್ ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತಚಲಾಯಿಸುತ್ತಿರುವವರನ್ನು ಸೆಳೆಯುವ ಸವಾಲು ನಮ್ಮ ಮುಂದಿದ್ದು, ನಮಗೆ ಉತ್ತಮ ಬೆಂಬಲ ದೊರೆಯುವ ನಿರೀಕ್ಷೆಯಿದೆ. ಪ್ರಚಾರ ವಾಹನಗಳು ರಾಜ್ಯಾದ್ಯಂತ ಸಂಚರಿಸಲಿವೆ. ಮತದಾನದ ಮಹತ್ವದ ಬಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಹ ಅರಿವು ಮೂಡಿಸಲಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 − three =
Remember me
