ಚಾಮರಾಜನಗರ:ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು ಕಾರ್ಮಿಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ಕುಮಾರ್ ಮತ್ತು ಶಿವರಾಜು ಮೃತ ದುರ್ದೈವಿಗಳು. ಸಿದ್ದರಾಜು ಸ್ಥಿತಿ ಗಂಭೀರವಾಗಿದೆ. ಕಾಗಲವಾಡಿ‌ ಮೊಳೆ ಗ್ರಾಮದ ಇವರೆಲ್ಲರೂ ಕ್ಲಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಕ್ವಾರೆಗೆ ಕುಳಿ ಹೊಡೆಯಬೇಕಾದರೆ ಮೇಲಿನಿಂದ ಬಂಡೆ ಬಿದ್ದಿದ್ದು, ಇದರಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ.

ತಮಿಳುನಾಡು ಮೂಲದ ಭಾಸ್ಕರ್ ಎಂಬುವವರಿಗೆ ಈ ಕಲ್ಲು ಕ್ವಾರೆ ಸೇರಿದೆ. ಬಂಡೆ ಕುಸಿದು ಇಬ್ಬರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಸಾಗಿಸಿದ್ದಾರೆ.

ಗುಂಡ್ಲುಪೇಟೆಯ ಮಡಹಳ್ಳಿಯ ಗುಮ್ಮಕಲ್ಲುಗುಡ್ಡದ ಕಲ್ಲು ಕ್ವಾರಿಯಲ್ಲಿ ಕಳೆದ ಮಾರ್ಚ್​ 4ರಂದು ಬಂಡೆ ಕುಸಿದು ಬಿಹಾರ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಚಾಮರಾಜನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ.
ಖಾಸಗಿಯವರ ಗುತ್ತಿಗೆ ಅವಧಿ ಮುಕ್ತಾಯ, ಕುಣಿಗಲ್​ ಸ್ಟಡ್​ ಫಾರ್ಮ್ ಹೊಣೆ ಕೇಂದ್ರ ಸರ್ಕಾರವೇ ವಹಿಸಿಕೊಳ್ಳಲಿ: ಎಸ್​ಪಿಎಂ ಮನವಿ

ಸಾಲ ಬಾಕಿ ಇರುವ ವಾಹನ ಖರೀದಿಸಿ ನಕಲಿ ಎನ್‌ಒಸಿ ಸೃಷ್ಟಿಸಿ ಕಾರು ಮಾರಾಟ! ಬ್ಯಾಂಕ್​-ಗ್ರಾಹಕರಿಗೆ ವಂಚಿಸುತ್ತಿದ್ದ ಮೂವರು ಖಾಕಿ ಬಲೆಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − two =
Remember me
