ಬೆಂಗಳೂರು:ತಮಿಳು ನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು. ನೀರು ನಿಲ್ಲಿಸಿದರೆ ಯಾವುದೇ ನ್ಯಾಯಾಂಗ ನಿಂದನೆ ಆಗುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ಜಲ ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಸೂಚನೆ ನೀಡಿದ ದಿನವೇ ನಾನು ಪ್ರಧಾನಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು ನಾನು ಹೇಳಿದ್ದೆ ಎಂದರು.
ಈಗಲೂ ಪ್ರಧಾನ ಮಂತ್ರಿಗಳಿಗೆ ಮಧ್ಯಪ್ರವೇಶ ಮಾಡುವಂತೆ ನಾನು ಒತ್ತಾಯ ಮಾಡುತ್ತೇನೆ. ನೀರು ಬಿಡಬೇಡಿ ಅಂತ ಮೊದಲ ದಿನವೇ ನಾನು ಹೇಳಿದ್ದೆ. ಸುಪ್ರೀಂ ಕೋರ್ಟಿಗೆ ತಮಿಳುನಾಡಿನವರು ಅರ್ಜಿ ಹಾಕಿದ್ದಾರೆ, ನಮ್ಮ ರಾಜ್ಯದಿಂದ ಕೂಡ ಅರ್ಜಿ ಹಾಕಿ. ಅಲ್ಲಿವರೆಗೂ ನೀರು ಬಿಡಬೇಡಿ ಎಂದು ಹೇಳಿದ್ದೆ. ನನ್ನ ಒತ್ತಡಕ್ಕೆ ಸರ್ವಪಕ್ಷ ಸಭೆ ಕೂಡ ಕರೆದಿದ್ದರು ಎಂದು ಆರೋಪ ಮಾಡಿದರು.
ಸುಪ್ರೀಂ ಕೋರ್ಟ್ ಮುಂದೆ ಈ ಸರ್ಕಾರ ಏನು ವಾಸ್ತವಾಂಶ ಇಟ್ಟಿದೆ ಎಂದು ಹೇಳಲಿ. ದೇವೇಗೌಡರ ಬದ್ಧತೆ ಇವರಿಗೆ ಇದೆಯಾ? ಇವರಿಂದ ಕಲೀಬೇಕಾ? ಎಂದು ಖಾರವಾಗಿ ಪ್ರಶ್ನಿಸಿದರು.
ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಕಾವೇರಿ ವಿಚಾರದಲ್ಲಿ ಇದೇ ಸ್ಥಿತಿ ಬಂದಾಗ ದೇವೇಗೌಡರ ಮನೆಗೆ ಓಡಿ ಬಂದಿದ್ದರಲ್ಲ. ಆಗ ದೇವೇಗೌಡರು ಗಾಂಧಿ ಪ್ರತಿಮೆ ಬಳಿ ಧರಣಿ ಕೂತರು. ಆಗ ಕೇಂದ್ರ ಸಚಿವರು ಓಡಿ ಬಂದರು. ಅದೆಲ್ಲ ಇವರಿಗೆ ಮರೆತುಹೋಗಿರಬೇಕು. ಇವರಿಂದ ನಾವು ಕಲೀಬೇಕಿಲ್ಲ ಎಂದು ಚಾಟಿ ಬೀಸಿದರು.
ಸುಪ್ರೀಂ ಕೋರ್ಟ್ ಮುಂದೆ ತಮಿಳುನಾಡು ಅರ್ಜಿ ಹಾಕಿದಾಗಲೇ ನಾವು ಅರ್ಜಿ ಹಾಕಿಕೊಂಡಿದ್ದರೆ ಅಲ್ಲಿಯವರೆಗೂ ನೀರು ಉಳಿಯುತ್ತಿತ್ತು. ಅಷ್ಟು ಸಾಮಾನ್ಯ ತಿಳಿವಳಿಕೆಯೂ ಈ ಸರ್ಕಾರಕ್ಕೆ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ತುಮಕೂರು ಜಿಲ್ಲೆಯ ಜನರು ದೇವೇಗೌಡರಿಗೆ ಮತ ಹಾಕಬಾರದು ಎಂದು ಹೇಳಿಕೆ ನೀಡಿರುವ ಸಂಸದ ಜಿ.ಎಸ್.ಬಸವರಾಜು ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಹರಿಹಾಯ್ದರು. ತುಮಕೂರಿಗೆ ಬಸವರಾಜ್ ಅವರ ಕೊಡುಗೆ ಏನು ಎಂದು ವಾಗ್ದಾಳಿ ನಡೆಸಿದರು.ಸಹಕಾರ ಸಚಿವರು ದೇವೇಗೌಡರು ಚುನಾವಣೆಗೆ ನಿಲ್ಲಬೇಕು, ನಾವು ಋಣ ತೀರಿಸಬೇಕು ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ನೀವು ಋಣ ತೀರಿಸಿದ್ದು ನೋಡಿದ್ದೇವೆ. ಇವರೆಲ್ಲ ದೇವೇಗೌಡರ ಹೆಸರು ಹೇಳಿಕೊಂಡು ರಾಜಕೀಯಕ್ಕೆ ಬಂದವರು. ಈ ಹಿಂದೆ ದೇವೇಗೌಡರು ಹುಷಾರಿಲ್ಲದ್ದರು ಹೋಗಿ ಇವರ ಪರ ಪ್ರಚಾರ ಮಾಡಿದ್ದಕ್ಕೇ ಇವರು ಗೆದ್ದಿದ್ದು. ಆಗ ಕೇವಲ 700 ಮತಗಳ ಅಂತರದಿಂದ ಗೆದಿದ್ದನ್ನು ಮರೆತಿದ್ದಾರೆ ಎಂದು ರಾಜಣ್ಣ ಹೆಸರು ಹೇಳದೇ ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದರು.
ಕಾವೇರಿ ಸ್ಥಿತಿ-ಗತಿ ಅಧ್ಯಯನಕ್ಕೆ ತಜ್ಞರ ತಂಡ ಕಳಿಸಿ; ದೇವೇಗೌಡ ಆಗ್ರಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 13 =
Remember me
