ಬೆಂಗಳೂರು:ಕರೊನಾ ಜಾಸ್ತಿಯಾದ ಬೆನ್ನಲ್ಲೇ ಕೆಲವರು ಹಣ ಮಾಡುವುದಕ್ಕೂ ಅನೇಕ ಮಾರ್ಗಗಳನ್ನು ಕಂಡುಕೊಂಡಿದ್ದಾರೆ. ಡೆತ್​ ಸರ್ಟಿಫಿಕೇಟ್, ಡಾಕ್ಟರ್​ ಸರ್ಟಿಫಿಕೇಟ್ ಹೀಗೆ ನಾನಾ ರೀತಿಯ ಸರ್ಟಿಫಿಕೇಟ್​ಗಳು ಹಾಗೂ ಆ್ಯಂಬುಲೆನ್ಸ್​ಗೆ ಹಣ ವಸೂಲಿ ಮಾಡಲಾಗುತ್ತಿದ್ದು, ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕಂದಾಯ ಸಚಿವ ಆರ್​ ಅಶೋಕ್​ ಎಚ್ಚರಿಕೆ ನೀಡಿದ್ದಾರೆ.
ಆ್ಯಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬರಲು, ಹೆಣ ಸಾಗಿಸಲು ಹಣ ಕೇಳಲಾಗುತ್ತಿದೆ. ಆಂಬುಲೆನ್ಸ್ ಚಾಲಕರು ಈ ದಂಧೆಯಲ್ಲಿ ಪಾಲ್ಗೊಂಡಿದ್ದಾರೆ. ಅವರ ಜತೆ ಕೆಲವು ವೈದ್ಯರೂ ಇಂತಹ ಕೆಲಸದಲ್ಲಿ ಶಾಮೀಲಾಗಿದ್ದಾರೆ. ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಕೆಲವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಇಂಥ ವಿಚಾರಗಳನ್ನು ಕಂಡು ಸುಮ್ಮನೆ ಕುಳಿತುಕೊಳ್ಳಬಾರದು. ಸರ್ಕಾರದ ಗಮನಕ್ಕೆ ತರಬೇಕು. ದಂಧೆಕೋರರು, ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲು ಮಾಡಿ ಕ್ರಮ ತೆಗೆದುಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಸಚಿವರು ಹೇಳಿದ್ದಾರೆ.
ಭೀಮಾ ತೀರದಲ್ಲಿ ಮತ್ತೆ ರಕ್ತದೋಕುಳಿ! ಜಿಲ್ಲಾ ಪಂಚಾಯ್ತಿ ಸದಸ್ಯನ ಸಹೋದರನ ಬರ್ಬರ ಹತ್ಯೆ
17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 − nine =
Remember me
