ಬೆಂಗಳೂರು:ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್​ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ: ವಿಐಎಸ್‍ಎಲ್ ಕಾರ್ಖಾನೆ ಪುನರುಜ್ಜೀವನಕ್ಕೆ 15 ಸಾವಿರ ಕೋಟಿ ರೂ. ಅಗತ್ಯವಿದೆ ಎಂದ ಸಚಿವ ಕುಮಾರಸ್ವಾಮಿ
ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಶೀಘ್ರವೇ ಅಂಗನವಾಡಿ ಶಿಕ್ಷಕಿಯರಿಗೆ ವೇತನ:ಜಿಲ್ಲೆಗಳ ಅಂಗನವಾಡಿ ಶಿಕ್ಷಕಿಯರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಎಲ್ಲಾ ವಿಚಾರವೂ ಅಂಗನವಾಡಿ ಶಿಕ್ಷಕಿಯರಿಗೆ‌ ಗೊತ್ತಿದೆ. ರಾಜ್ಯ ಸರ್ಕಾರದಿಂದ 7 ಸಾವಿರ ರೂ,‌ ಕೇಂದ್ರದಿಂದ 4 ಸಾವಿರ ರೂ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವರ ಜೊತೆ ಮಾತಾಡಿದ್ದೇನೆ. ಈ‌ ಹಿಂದೆಯೂ ಹಲವು ಬಾರಿ ವೇತನ ವಿಳಂಬ ಆಗಿತ್ತು. ಗೌರಿ ಗಣೇಶ ಹಬ್ಬದೊಳಗೆ ಹಣ ಬಿಡುಗಡೆಗೆ ಪ್ರಯತ್ನ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಳಾಳ್ಕರ್ ಹೇಳಿದ್ದಾರೆ.
ಪ್ರವಾಹ ಪೀಡಿತ ಆಂಧ್ರ, ತೆಲಂಗಾಣಕ್ಕೆ ನಟ ಪವನ್ ಕಲ್ಯಾಣ್ 6 ಕೋಟಿ ರೂ.ದೇಣಿಗೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 2 =
Remember me
