ಮಾಲೂರು:ಜೆಡಿಎಸ್​ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಘೋಷಿಸಿದರು.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮಾಸ್ತಿ ಗ್ರಾಮಕ್ಕೆ ಭಾನುವಾರ ಜೆಡಿಎಸ್​ನ ಪಂಚರತ್ನ ರಥಯಾತ್ರೆ ತಲುಪಿತು. ರಥಯಾತ್ರೆಯ ದಾರಿಯುದ್ದಕ್ಕೆ ಎಚ್​ಡಿಕೆ ಅವರ ಬಳಿ ರೈತ ಮಹಿಳೆಯರು, ಸ್ತ್ರೀ ಸಂಘಗಳ ಸದಸ್ಯರು ಸಾಲ ಮನ್ನ ಮಾಡುವಂತೆ ಕಷ್ಟ ಹೇಳಿಕೊಂಡಿದ್ದರು.
ಮಾಸ್ತಿ ಗ್ರಾಮದಲ್ಲಿ ಮಾತನಾಡಿದ ಎಚ್​ಡಿಕೆ, 2018ರಲ್ಲಿ ಜೆಡಿಎಸ್​ಗೆ ಬಹುಮತ ಸಿಕ್ಕಿ ಸರ್ಕಾರ ರಚಿಸಿದ್ದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡುವ ಉದ್ದೇಶವಿತ್ತು. ಆಗ ಮೈತ್ರಿ ಸರ್ಕಾರದಲ್ಲಿ ರೈತರ 25 ಸಾವಿರ ಕೋಟಿ ರೂ. ಮನ್ನಾ ಮಾಡಿದ್ದೆವು. ಅದಾದ ಬಳಿಕ ಸ್ತ್ರೀಶಕ್ತಿ ಸಂಘಗಳ 1 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಲು ತೀರ್ಮಾನಿಸಿದ್ದೆ. ಅಷ್ಟರಲ್ಲಿ ಸರ್ಕಾರವನ್ನು ಕೆಡವಿದ್ದರಿಂದ ಸಾಲಮನ್ನಾ ಮಾಡಲಾಗಲಿಲ್ಲ. ಜೆಡಿಎಸ್​ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುವುದು ಎಂದು ಘೋಷಿಸಿದರು.ಕಾಂಗ್ರೆಸ್​-ಜೆಡಿಎಸ್​ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮಾಲೂರು ತಾಲೂಕಿನ ರಸ್ತೆಗಳ ಅಭಿವೃದ್ಧಿಗೆ 220 ಕೋಟಿ ರೂ. ಅನುದಾನ ನೀಡಿದ್ದೇನೆ ಎಂದರು.
ಮಾಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಜಿ.ಇ. ರಾಮೇಗೌಡ ಮಾತನಾಡಿ, ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ರಾಮರಾಜ್ಯ ನಿರ್ಮಾಣವಾಗುತ್ತದೆ ಎಂದರು. ರಾತ್ರಿ ಮಾಲೂರು ಪಟ್ಟಣದಲ್ಲಿ ಕುಮಾರಸ್ವಾಮಿ ರೋಡ್​ ಶೋ ನಡೆಸಿದರು.
ಶಿವಾರಪಟ್ಟಣದಲ್ಲಿ ವಾಸ್ತವ್ಯ:ಶಿವಾರಪಟ್ಟಣಕ್ಕೆ ರಾತ್ರಿ ಆಗಮಿಸಿದ್ದ ಯಾತ್ರೆಯನ್ನು ಗ್ರಾಮಸ್ಥರು ಅದ್ದೂರಿ ಸ್ವಾಗತ ಮಾಡಿದರು. ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ, ಗ್ರಾಮವಾಸ್ತವ್ಯ ಮಾಡಿದರು.
ನಿಶಾ ಅಂಬಾನಿ-ಆನಂದ್ ಪಿರಾಮಲ್ ದಂಪತಿಗೆ ಅವಳಿ ಮಕ್ಕಳು

ಆನೆ ದಂತದಿಂದ ತಯಾರಿಸಿದ ವಾಕಿಂಗ್ ಸ್ಟಿಕ್ ಸೇರಿದಂತೆ ಪುರಾತನ ಕಾಲದ ವಸ್ತುಗಳ ಸಮೇತ ಸಿಸಿಬಿಗೆ ಸಿಕ್ಕಿಬಿದ್ದ ಗ್ಯಾಂಗ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − four =
Remember me
