ಬೆಂಗಳೂರು: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಸ್ಥರು ನಮ್ಮಿಂದ ನ್ಯಾಯವನ್ನು ನಿರೀಕ್ಷೆ ಮಾಡಬಹುದು. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಕೋರ್ಟ್‌ನಲ್ಲಿ ಸಹ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಆಧರಿಸಿ ಯಾರನ್ನು ಎ1, ಎ2 ಆರೋಪಿಗಳನ್ನಾಗಿಸಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದರು.
ಸಿದ್ಧಾರ್ಥ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ಹಂಚಿಕೆ ಕುರಿತು ಸಚಿವ ಎಂ.ಬಿ.ಪಾಟೀಲ್ ಅವರು ಸ್ಪಷ್ಟನೆ ನೀಡಿದ್ದಾರೆ. ಕಾನೂನು ಬಾಹಿರವಾಗಿ ಹಂಚಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪರಿಶೀಲನೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕಾದವರು ರಾಜ್ಯಪಾಲರು. ಸಾವಿರಾರು ಜನ ದೂರು ಕೊಡುತ್ತಾರೆ. ಪರಿಶೀಲನೆ ನಡೆಸಿದ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ. ಅನಾವಶ್ಯಕವಾಗಿ ಆಪಾದನೆ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮೊದಲಿಂದಲೂ ಹೇಳುತ್ತಿದ್ದೇವೆ. ರಾಜಕೀಯ ಉದ್ದೇಶ ಇಟ್ಟುಕೊಂಡು ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ನಾವು ಜನರ ಮುಂದೆ ಸತ್ಯಸತ್ಯಾತೆ ಇಡುತ್ತೇವೆ. ನಾವು ಯಾವುದನ್ನು ಕೂಡ ಕಾನೂನು ಬಾಹಿರವಾಗಿ ಮಾಡಿಲ್ಲ ಎಂಬುದನ್ನು ಈಗಾಗಲೇ ಕೋರ್ಟ್‌ಗೆ ತಿಳಿಸಿದ್ದೇವೆ ಎಂದರು.
ಬಿಟ್ ಕಾಯಿನ್, ವಾಲ್ಮೀಕಿ, ಕೋವಿಡ್ ಸಂದರ್ಭದಲ್ಲಿ ನಡೆದ ಅಕ್ರಮ ಸೇರಿದಂತೆ ಎಲ್ಲ ಪ್ರಕರಣಗಳ ಪರಿಶೀಲನೆ ನಡೆಯುತ್ತಿದೆ. ಎಸ್‌ಐಟಿಗೆ ವಹಿಸಿರುವ ಮತ್ತು ಸಿಐಡಿ ಕೈಗೊಂಡಿರುವ ಪ್ರಕರಣಗಳ ತನಿಖೆ ಯಾವ ಹಂತದಲ್ಲಿವೆ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇನೆ. ಈ ಎಲ್ಲ ಪ್ರಕರಣಗಳ ಪರಿಶೀಲನೆ ನಡೆಸಲು ಮುಂದಿನ ದಿನಗಳಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸಚಿವ ಸತೀಶ್ ಜಾರಕಿಹೊಳಿಯವರು ನನಗೆ ಸೋಷಿಯಲ್ ಮೀಡಿಯಾ ಟ್ವೀಟರ್, ಫೇಸ್‌ಬುಕ್‌ನಲ್ಲಿ ವೈಯಕ್ತಿಕ ನಿಂದನೆಯ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಇದರಿಂದ ಗೌರವಕ್ಕೆ ದಕ್ಕೆಯಾಗುತ್ತಿದೆ ಎಂದು ಹೇಳಿದ್ದರು. ಇದೇ ವಿಚಾರಕ್ಕೆ ನಾನು ಭೇಟಿಯಾಗಿದ್ದೆ. ಅದನ್ನು ಬೇರೆ ತರ ಅರ್ಥೈಸಿಕೊಳ್ಳಲಾಗಿದೆ ಎಂದು ಡಾ.ಪರಮೇಶ್ವರ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 3 =
Remember me
