ಬೆಂಗಳೂರು:ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೆ ಬರಲಿಲ್ಲ ಎಂದು ಹಾಸ್ಟೆಲ್​ಗೆ ಹೋಗಿ ನೋಡಿದ ಸಿಬ್ಬಂದಿಗೆ ಕಾಣಿಸಿದ್ದು ನೇತಾಡುತ್ತಿದ್ದ ಶವ. ಇಂಥದ್ದೊಂದು ಪ್ರಕರಣ ನಗರದ ಹಾಸ್ಲೆಲ್​ವೊಂದರಲ್ಲಿ ನಡೆದಿದೆ.
ಶಿವಾನಿ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಜೆಎಸ್​ಎಸ್​ ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಈಕೆ ಪರೀಕ್ಷೆಗೆ ಹಾಜರಾಗದ ಕಾರಣ ಸಿಬ್ಬಂದಿ ಹಾಸ್ಟೆಲ್​ಗೆ ಹೋಗಿ ನೋಡಿದ್ದರು. ಅಲ್ಲಿ ಈಕೆ ಫ್ಯಾನ್​ಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿತ್ತು.
ರೂಮ್​ನ ಬಾಗಿಲು ಲಾಕ್​ ಮಾಡಿಕೊಂಡು ಒಳಗಿದ್ದಳು. ಎಷ್ಟು ಕರೆದರೂ ಪ್ರತಿಕ್ರಿಯೆ ಇರದಿದ್ದಾಗ ಕಿಟಕಿ ಗಾಜು ಒಡೆದು ನೋಡಿದ ಸಿಬ್ಬಂದಿಗೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿತ್ತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ವಿಷಯ ಗೊತ್ತಾಗಿದೆ.
ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು, ಜೆಎಸ್​ಎಸ್​​ ಪ್ರಾಂಶುಪಾಲರ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಆಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಂಶುಪಾಲರು ದೂರಿನಲ್ಲಿ ತಿಳಿಸಿದ್ದಾರೆ. ಆದರೆ ಯಾವುದೇ ಡೆತ್​ನೋಟ್​ ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..

ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದ ಅಕ್ಕ ಹೃದಯಾಘಾತದಿಂದ ಸಾವು!

ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

ನಿಮ್ಮೂರಿಗಿನ್ನು ಇವರೇ ಇನ್​ಸ್ಪೆಕ್ಟರ್; ಇಲ್ಲಿದೆ ಪೂರ್ತಿ ಮಾಹಿತಿ: 12 ಡಿವೈಎಸ್‌ಪಿ, 92 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × one =
Remember me
