ಕಲಬುರಗಿ:ಇಲ್ಲಿನ ವಿದ್ಯಾರ್ಥಿನಿಯೊಬ್ಬಳು ಸೇತುವೆ ಮೇಲೆ ತನ್ನ ಡಿಯೋ ನಿಲ್ಲಿಸಿ, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗೆ ನದಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಾಗಿದೆ.
ಭಾಗ್ಯಶ್ರೀ (21) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ತಾಪುರ ತಾಲೂಕಿನ ಗುಂಡುಗುರ್ತಿ ಗ್ರಾಮದ ನಿವಾಸಿಯಾಗಿದ್ದ ಈಕೆ ಕಲಬುರಗಿಯಲ್ಲಿ ಬಿಎಸ್​ಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆ ಗುಂಡುಗುರ್ತಿ ತಾಲೂಕು ಪಂಚಾಯಿತಿ ಸದಸ್ಯ ಬಸವರಾಜ್ ಅವರ ಪುತ್ರಿ.
ಇದನ್ನೂ ಓದಿ:ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿನಿ; ಹಾಸ್ಟೆಲ್​ನಲ್ಲಿ ನೇತಾಡುತ್ತಿತ್ತು ಶವ!
ಇಂದು ಮನೆಯಿಂದ ತನ್ನ ಡಿಯೋ ವಾಹನದಲ್ಲಿ ಹೊರಟಿದ್ದ ಈಕೆ ಶಹಾಬಾದ್ ಶಂಕರವಾಡಿ ಬಳಿಯ ಕಾಗಿಣಾ ನದಿಯ ಸೇತುವೆ ಮೇಲೇ ವಾಹನ ನಿಲ್ಲಿಸಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಪತ್ತೆ ಮಾಡಿ ತೆಗೆದಿದ್ದಾರೆ. ಶಹಾಬಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.
ಹೆಂಡತಿಯನ್ನೇ ಬರ್ಬರವಾಗಿ ಕೊಂದ; 17 ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು…
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!
ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − nine =
Remember me
