ವಿಜಯನಗರ:ಹೊಸಪೇಟೆ ತಾಲೂಕಿನಲ್ಲೊಬ್ಬ ಕಾಮುಕ ಶಿಕ್ಷಕನಿದ್ದು, ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ವಿದ್ಯಾರ್ಥಿಗಳೇ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ.
ಹೊಸಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಟಿ. ಜಂಬಣ್ಣ ಎಂಬಾತ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಮಕ್ಕಳು ಆರೋಪಿಸಿದ್ದಾರೆ. ಅಲ್ಲದೆ, ಆ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮಕ್ಕಳ ಪಾಲಕರು, ಗ್ರಾಮಸ್ಥರು ಕೂಡ ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ.ಇದನ್ನೂ ಓದಿರಿತಾಲೂಕು ಕಚೇರಿ ಆವರಣದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಮಾನಸಿಕ ಅಸ್ವಸ್ಥ!
ಮುಖ್ಯಶಿಕ್ಷಕ ಟಿ. ಜಂಬಣ್ಣನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈ ಶಿಕ್ಷಕನ ವಿರುದ್ಧ 13 ವಿದ್ಯಾರ್ಥಿನಿಯರು ಲಿಖಿತ ರೂಪದಲ್ಲಿ ನಮಗೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ನಾವು ಸಮಿತಿ ಮಾಡಿ ತನಿಖೆ ಮಾಡಿಸಿದ್ದೇವೆ. ಮೇಲ್ನೋಟಕ್ಕೆ ಆರೋಪ ಸಾಬಿತಾಗಿದ್ದು, ಶಿಕ್ಷಕನ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ. ಈ ಬಗ್ಗೆ ಬಳ್ಳಾರಿ ಡಿಡಿಪಿಐಗೆ ವರದಿ ನೀಡಿದ್ದೇವೆ ಎಂದು ಹೊಸಪೇಟೆ ಬಿಇಒ ಸುನಂದಮ್ಮ ಹೇಳಿದ್ದಾರೆ.
ಶಾಸಕರ ದೌರ್ಜನ್ಯ ಸಹಿಸಲಾಗ್ತಿಲ್ಲ.. ದಯಾಮರಣ ಕೊಡಿ ಎಂದು ಸಿಎಂ ಪುತ್ರನ ಬಳಿ ಕಣ್ಣೀರಿಟ್ಟ ಮಹಿಳೆಯರು

ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
