ಆನೇಕಲ್:ರಾಜ್ಯ ಮಾತ್ರವಲ್ಲ ದೇಶಾದ್ಯಂತ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿದ್ದು, ಆತಂಕ ಮೂಡಿಸಿದ್ದರೂ ಆ ಕುರಿತ ಯಾವುದೇ ಅಧ್ಯಯನ ನಡೆಯುತ್ತಿಲ್ಲ. ಮತ್ತೊಂದೆಡೆ ರಾಜಕಾರಣಿಗಳು ಕೂಡ ಆ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಈ ಎಲ್ಲದರ ಮಧ್ಯೆ ಹೃದಯಾಘಾತದ ಸಾವಿನ ಪ್ರಕರಣಗಳ ಸರದಿ ಮುಂದುವರಿದಿದ್ದು, ಇಂದು ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವಿಗೀಡಾಗಿದ್ದಾಳೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನ ಅತ್ತಿಬೆಲೆಯಲ್ಲಿ ಈ ದುರಂತ ಸಂಭವಿಸಿದೆ. ಸಂಗೀತಾ ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವಿಗೀಡಾದ ಹುಡುಗಿ. ಈಕೆ ಇಲ್ಲಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಧಾರವಾಡ ಮೂಲದ ಈ ವಿದ್ಯಾರ್ಥಿನಿ, ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಿದ್ದಳು.
ಕಾಲೇಜಿನಲ್ಲಿ ಇಂದು ಕ್ರೀಡಾ ಉತ್ಸವ ಆಯೋಜನೆ ಮಾಡಿದ್ದು, ಈಕೆ ಮಹಿಳೆಯರ ಕಬಡ್ಡಿ ತಂಡದಲ್ಲಿದ್ದಳು. ಕಬಡ್ಡಿ ಆಡುವಾಗ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದ ಈಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಸಾವಿಗೀಡಾದಳು. ಇಂದು ಸಂಜೆ ಐದರ ಸುಮಾರಿಗೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಮೃತಪಟ್ಟ ಹಿನ್ನೆಲೆಯಲ್ಲಿ ನಾಳೆ ಈ ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಮೈದಾನದಲ್ಲೇ ಕುಸಿದು ಬಿದ್ದು ಸಾವಿಗೀಡಾದ ಕ್ರಿಕೆಟಿಗ; ರನ್​ಗಾಗಿ ಓಡುತ್ತಿದ್ದಾಗ ಹೃದಯಾಘಾತ..
ರಂಗ ವೇದಿಕೆಯಲ್ಲೇ ಹೃದಯಾಘಾತ; ನಾಟಕ ಮಾಡುತ್ತಿದ್ದಾಗಲೇ ಪ್ರಾಣ ಬಿಟ್ಟ ಮತ್ತೊಬ್ಬ ಕಲಾವಿದ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
