ಚಾಮರಾಜನಗರ:ಹೊಗೆನಕಲ್ ಜಲಪಾತದಲ್ಲಿ ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋದ ವಿದ್ಯಾರ್ಥಿ ನೀರುಪಾಲಾದ ಘಟನೆ ಹನೂರು ತಾಲೂಕಿನಲ್ಲಿ ಗುರುವಾರ ಸಂಭವಿಸಿದೆ.
ಮೈಸೂರು ಮೂಲದ ಸಂಗಮೇಶ್ ಎಂಬುವರ ಮಗ ಉಮಾಶಂಕರ್(19) ಮೃತ ದುರ್ದೈವಿ. ನರ್ಸಿಂಗ್ ಓದುತ್ತಿದ್ದ ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಜತೆ ಗುರುವಾರ ಹೊಗೆನಕಲ್​ ಫಾಲ್ಸ್​ಗೆ ತೆರಳಿದ್ದ.
ಪ್ರವಾಸದ ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್, ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿ ತನ್ನ ಸ್ನೇಹಿತರಿಗೆ ಫೋಟೋ ತೆಗೆಯುವಂತೆ ಹೇಳಿದ್ದಾನೆ‌. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ‌‌‌.
80 ಅಡಿಗೂ ಹೆಚ್ಚು ಆಳವಾದ ಜಾಗಕ್ಕೆ ಉಮಾಶಂಕರ್ ಬಿದ್ದಿದ್ದಾನೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟದ ಠಾಣೆ ಪೊಲೀಸರು ತೆರಳಿ ಗೋಪಿನಾಥಂನ ನುರಿತ ಈಜುಗಾರ ತಂಡ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ.
ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

ಒಲ್ಲೆ ಎಂದರೂ ಅಣ್ಣನ ಎದುರೇ ‘ಬಾ.. ಮೊದಲಿನಂತೆ ನನ್ನ ಜತೆಗಿರು ಬಾ..’ ಎಂದು ಸೋದರಿಯನ್ನ ಪೀಡಿಸುತ್ತಿದ್ದ… ನಡೆದೇ ಹೋಯ್ತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + eleven =
Remember me
