ಚಿಕ್ಕಬಳ್ಳಾಪುರ:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್​ ದೊರೆತ್ತಿದ್ದು, ಬಸ್​ನಲ್ಲಿ ಪ್ರಯಾಣಿಸಲು ನೂಕುನುಗ್ಗಲು ಉಂಟಾಗುತ್ತಿದೆ.
ಯೋಜನೆಗೆ ಚಾಲನೆ ನೀಡಿ ತಿಂಗಳು ಕಳೆಯುತ್ತಾ ಬಂದರೂ ಬಸ್​ನಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೆಲವೆಡೆ ಮಹಿಳೆಯರು ಬಸ್​ ಹತ್ತುವಾಗ ಡೋರ್​, ಕಿಟಕಿಯ ಸರಳುಗಳು ಕಿತ್ತುಕೊಂಡು ಬಂದಿರುವ ಫೋಟೋ ಹಾಗು ವಿಡಿಯೋವನ್ನು ನಾವು ನೋಡಿದ್ದೇವೆ.
ಇದೀಗ ಘಟನೆ ಒಂದರಲ್ಲಿ ವಿದ್ಯಾರ್ಥಿನಿ ಓರ್ವಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಜಾತವಾರಹೊಸಹಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ:VIDEO| ಮೆಟ್ರೋದಲ್ಲಿ ಯುವಕನ ಕಪಾಳಕ್ಕೆ ಹೊಡೆದು ಏಕಾಏಕಿ ಕೂಗಾಡಲು ಶುರು ಮಾಡಿದ ಮಹಿಳೆ
ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ನಡುವೆ ಸಂಚರಿಸುವ ಬಸ್​ನಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಈ ವೇಳೆ ವಿದ್ಯಾರ್ಥಿನಿ ಬಸ್​ ಫುಟ್​ಬೋರ್ಡ್​ ಏರಿದ್ದು, ಚಲಿಸುತ್ತಿರುವಾಗಲ್ಲೇ ನಿಲ್ಲಲು ಸಾಧ್ಯವಾಗದೆ ಕೆಳಗೆ ಬಿದ್ದಿದ್ದಾಳೆ. ಕೂಡಲೇ ಎಚ್ಚತ್ತೆ ವಿದ್ಯಾರ್ಥಿನಿ ಮೇಲೆದ್ದು ನಿಂತಿದ್ದಾಳೆ. ಇಲ್ಲವಾದ್ದಲ್ಲಿ ಅಕೆಯ ತಲೆ ಚಕ್ರದ ಅಡಿ ಸಿಲುಕಿ ಮೃತಪಡುತ್ತಿದ್ದಳು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾರಿಗೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಇಯಿಂದ ಸಮರ್ಪಕ ಬಸ್​ ಸೌಲಭ್ಯ ಒದಗಿಸುವಂತೆ ಆಗ್ರಹಗಳು ಕೇಳಿ ಬರುತ್ತಿವೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − 8 =
Remember me
