ಬೆಂಗಳೂರು:ಮಕ್ಕಳು ಅಪಾರ್ಟ್​ಮೆಂಟ್​ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಕೆಲವು ಪ್ರಕರಣಗಳು ನಡೆದಿದ್ದು, ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ನಡೆದಿದೆ. ಇಲ್ಲಿ ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರಾಜಧಾನಿ ಬೆಂಗಳೂರಿನ ಬೆಳ್ಳಂದೂರಿನ ಅಪಾರ್ಟ್​ಮೆಂಟ್​ನಲ್ಲಿ ಇಂದು ಈ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಜೆಸ್ಸಿಕಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಇದನ್ನೂ ಓದಿ:ಅಪಾರ್ಟ್​​ಮೆಂಟ್​ನ 19ನೇ ಮಹಡಿಯಿಂದ ಹಾರಿ ಪ್ರಾಣ ಕಳ್ಕೊಂಡ ಮಹಿಳೆ!
ಈಕೆ ಇಲ್ಲಿನ ಅಪಾರ್ಟ್​ಮೆಂಟ್​ವೊಂದರ 11ನೇ ಮಹಡಿಯಲ್ಲಿ ಕಳೆದ ಎರಡು ವರ್ಷಗಳಿಂದ ತಂದೆ-ತಾಯಿ ಜೊತೆ ವಾಸವಿದ್ದಳು. ಇವರು ಮೂಲತಃ ತಮಿಳುನಾಡಿನವರಾಗಿದ್ದು, ತಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ:ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ
ಈಕೆ ಇಂದು ಬೆಳಗ್ಗೆ 10.30ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 12ನೇ ಮಹಡಿಗೆ ಹೋಗಿ ಅಲ್ಲಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಾರ್ಟ್​ಮೆಂಟ್ ಹತ್ತನೇ ಮಹಡಿಯಿಂದ ಹಾರಿದ ವಿದ್ಯಾರ್ಥಿ; ತಪ್ಪು ಮಾಡಿ ಸಿಕ್ಕಿಬಿದ್ದ ಮುಜುಗರ ಎದುರಿಸಲಾಗದೆ ಸಾವಿಗೆ ಶರಣು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
