ಕಡಬ/ಈಶ್ವರಮಂಗಲ:ದ.ಕ.ಜಿಲ್ಲೆಯ ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ಅಂಕತ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಶುಕ್ರವಾರ ಶಾಲಾ ತರಗತಿ ಕೊಠಡಿಯೊಳಗೆ ಸಾಮೂಹಿಕವಾಗಿ ನಮಾಜ್ ಮಾಡಿದ್ದಾರೆ. ನಮಾಜ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇನ್ನೊಂದೆಡೆ, ಶಾಲೆಯಲ್ಲಿ ನಮಾಜ್‌ಗೆ ಅವಕಾಶ ನೀಡಿರುವುದು ಸ್ಥಳೀಯರ ವಿರೋಧಕ್ಕೂ ಕಾರಣವಾಗಿದೆ.
ಶಾಲೆಯಲ್ಲಿ ಕಲಿಯುತ್ತಿರುವ ಮುಸ್ಲಿಂ ಸಮುದಾಯದ 5 ಹಾಗೂ 7ನೇ ತಗತಿಯ ವಿದ್ಯಾರ್ಥಿಗಳು ಕ್ಲಾಸ್ ರೂಂನಲ್ಲಿ ಕಳೆದ ಶುಕ್ರವಾರವೂ ಸಾಮೂಹಿಕವಾಗಿ ನಮಾಜ್ ಮಾಡಿದ್ದರೆಂಬ ವಿಷಯವೂ ಇದೀಗ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ನಡೆಯುತ್ತಿರುವ ಈ ವಿದ್ಯಮಾನವನ್ನು ಸ್ಥಳೀಯರು ಈ ಹಿಂದೆಯೂ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. ಆದರೂ, ಈ ಶುಕ್ರವಾರ ಮತ್ತೆ ನಮಾಜ್ ಮುಂದುವರಿದಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಬೆಳ್ಳಾರೆ ಪೊಲೀಸರು ಶಾಲೆಗೆ ಭೇಟಿ ನೀಡಿದ್ದಾರೆ.ಈ ಬಗ್ಗೆ ‘ವಿಜಯವಾಣಿ’ ಜತೆ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಜಲಜಾ, ಕಳೆದ ಶುಕ್ರವಾರ ಶಾಲಾ ಕೊಠಡಿಯೊಳಗೆ ವಿದ್ಯಾರ್ಥಿಗಳು ನಮಾಜ್ ಮಾಡಿರುವುದು ನಮ್ಮ ಗಮನಕ್ಕೆ ಬಂದಿಲ್ಲ. ಆದರೂ, ತರಗತಿ ಕೊಠಡಿಯಲ್ಲಿ ಈ ರೀತಿಯ ಚಟುವಟಿಕೆ ನಡೆಸದಂತೆ ಮಕ್ಕಳಿಗೆ ಸೂಚಿಸಲಾಗಿದೆ. ಸಂಬಂಧಪಟ್ಟವರ ಗಮನಕ್ಕೂ ತರಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇಂದು ಶಾಲೆಯಲ್ಲಿ ಪಾಲಕರ ಸಭೆ:ಈ ಬಗ್ಗೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪ್ರವೀಣ್ ಭಂಡಾರಿ ಅಂಕತ್ತಡ್ಕ ಹೆಚ್ಚಿನ ಮಾಹಿತಿ ನೀಡಿದ್ದಾರೆ. ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿಗಳ ಪಾಲಕರು ಶುಕ್ರವಾರ ಮಧ್ಯಾಹ್ನ ಶಾಲೆಯಲ್ಲಿ ನಮಾಜ್ ಮಾಡಲು ಅವಕಾಶ ಕೋರಿದ್ದರು. ಆದರೆ ಕಾನೂನು ಚೌಕಟ್ಟಿನಲ್ಲಿ ಶಾಲೆಯೊಳಗೆ ನಮಾಜ್‌ಗೆ ಅವಕಾಶವಿಲ್ಲ. ಪಾಲಕರು ಬಂದು ಮಕ್ಕಳನ್ನು ಮಸೀದಿಗೆ ಕರೆದುಕೊಂಡು ಹೋಗಿ ಮತ್ತೆ ಶಾಲೆಗೆ ಕರೆತರಲು ಅವಕಾಶವಿದೆ. ಈ ಬಗ್ಗೆ ಮುಂಚಿತವಾಗಿಯೇ ಲಿಖಿತ ಮನವಿ ನೀಡಲು ತಿಳಿಸಲಾಗಿತ್ತು. ಮುಸ್ಲಿಂ ಸಮುದಾಯದ ಕೆಲವು ವಿದ್ಯಾರ್ಥಿಗಳು ಶಾಲಾ ಕೊಠಡಿಯೊಳಗೆ ಇತರ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ ಬಾರದ ರೀತಿ ಬಾಗಿಲು ಹಾಕಿಕೊಂಡು ಸಾಮೂಹಿಕವಾಗಿ ನಮಾಜ್ ಮಾಡಿರುವ ವಿಚಾರ ನಮಗೆ ಗೊತ್ತಿರಲಿಲ್ಲ. ಈ ವಿಚಾರಕ್ಕೆ ಸಂಬಂಧಿಸಿ ಫೆ.12ರಂದು ಬೆಳಗ್ಗೆ 10 ಗಂಟೆಗೆ ಶಾಲೆಯಲ್ಲಿ ಪಾಲಕರ ಸಭೆ ಕರೆಯಲಾಗಿದೆ. ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಶಾಲೆಯಲ್ಲಿ ಸಾಮೂಹಿಕ ನಮಾಜ್ ವಿಚಾರ ಗಮನಕ್ಕೆ ಬಂದ ಕೂಡಲೇ, ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದುಕೊಳ್ಳಲಾಗಿದೆ. ವರದಿ ನೀಡುವಂತೆ ಸಂಬಂಧಪಟ್ಟ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗೆ ಸೂಚಿಸಲಾಗಿದೆ.
ಲೋಕೇಶ್ ಸಿ.ಕ್ಷೇತ್ರ ಶಿಕ್ಷಣಾಧಿಕಾರಿ
ಶಾಲೆಯಲ್ಲಿ ಮಕ್ಕಳು ನಮಾಜು ಮಾಡುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಪಡೆದ ಬಳಿಕ ಮಾತನಾಡುತ್ತೇನೆ.
ಸುನೀಲ್ ಕುಮಾರ್ಉಸ್ತುವಾರಿ ಸಚಿವ, ದ.ಕ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 8 =
Remember me
