ಬೆಂಗಳೂರು:ಕಾಲೇಜು ವಿದ್ಯಾರ್ಥಿಯೊಬ್ಬ ಎರಡೆರಡು ಬಾರಿ ಫೇಲ್​ ಆಗಿದ್ದೇನೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಯ್ಯಪ್ಪನಹಳ್ಳಿ ಬಳಿಯ ಕೃಷ್ಣಯ್ಯನಪಾಳ್ಯದಲ್ಲಿ ನಡೆದಿದೆ.
ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಚಾರ್ಲ್ಸ್(18) ಎಂದು ಗುರುತಿಸಲಾಗಿದೆ. ಈತ ಆರು ತಿಂಗಳ ಹಿಂದೆ ಪ್ರಥಮ ಪಿಯುಸಿಯಲ್ಲಿ ಫೇಲಾಗಿದ್ದು ನಂತರ ಮರು ಪರೀಕ್ಷೆಯಲ್ಲಿಯೂ ಪರೀಕ್ಷೆ ಬರೆದು ಫೇಲ್ ಆಗಿದ್ದ. ಈ ವೇಳೆ, ಕಾಲೇಜಿನವರು ಬೇರೆ ಕಾಲೇಜಿಗೆ ಸೇರಿಸುವಂತೆ ಹೇಳಿದ್ದರು.
ಮೊದಲ ಬಾರಿ ಫೇಲಾಗಿದ್ದಾಗಿನಿಂದಲೂ ಮನನೊಂದಿದ್ದ ಚಾರ್ಲ್ಸ್ ಪುನಃ ಫೇಲಾಗಿದ್ದರಿಂದ ಖಿನ್ನತೆಗೆ ಒಳಗಾಗಿದ್ದ. ದುಃಖದಲ್ಲಿದ್ದ ಯುವಕ ಸಾಯುವ ನಿರ್ಧಾರ ತೆಗೆದುಕೊಂಡಿದ್ದು ಅದರಂತೆ ರಾತ್ರಿ 9:30ರ ಸುಮಾರಿಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .
ಸದ್ಯ ಚಾರ್ಲ್ಸ್ ಮೃತದೇಹವನ್ನು ಸಿವಿ ರಾಮನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಬಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
