ಹುಬ್ಬಳ್ಳಿ:ಕಾಲೇಜಿನೊಳಗೆ ನುಗ್ಗಿ ಯುವಕನೋರ್ವ ವಿದ್ಯಾರ್ಥಿ ಒಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಘಟನೆಯೂ ಬಿವಿಬಿ ಕಾಲೇಜಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೃತರನ್ನು ಎಂಸಿಎ ವಿದ್ಯಾರ್ಥಿನಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಹಿರೇಮಠ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸದಿದ್ದರೆ ಸಿದ್ದರಾಮಯ್ಯ ಕುರ್ಚಿಗೆ ಕಂಟಕ: ಸಚಿವ ಬೈರತಿ ಸುರೇಶ್
ಈ ಕುರಿತು ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಾಸ್ಕ್​ ಧರಿಸಿದ್ದ ವ್ಯಕ್ತಿಯೋರ್ವ ಕಾಲೇಜಿನೊಳಗೆ ಏಕಾಏಕಿ ನುಗ್ಗಿದ್ದು, ನೇಹಾ ಹಿರೇಮಠ್​ ಮೇಲೆ ದಾಳಿ ಮಾಡಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಘಟನೆ ಸಂಬಂಧ ವಿದ್ಯಾನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ವಿದ್ಯಾರ್ಥಿನಿಯ ಮೃತದೇಹವನ್ನು ಕಿಮ್ಸ್​ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
