ಉಡುಪಿ:ಅಪಘಾತದಲ್ಲಿ ಗಾಯಗೊಂಡರೂ ವಿದ್ಯಾರ್ಥಿಗಳಿಬ್ಬರು ಆಂಬುಲೆನ್ಸ್​ನಲ್ಲಿ ಕಾಲೇಜಿಗೆ ತೆರಳಿದ್ದಲ್ಲದೆ, ಪರೀಕ್ಷೆಯನ್ನೂ ಬರೆದು ಮೆಚ್ಚುಗೆ ಗಳಿಸಿದ್ದಾರೆ. ಕುಂದಾಪುರದ ಭಂಡಾರ್​​ಕಾರ್ಸ್​ ಕಾಲೇಜಿನ ವಿದ್ಯಾರ್ಥಿಗಳಾದ ಮಸಾಯಿದ್ ಹಾಗೂ ವಾಜಿದ್​ ಈ ಮೂಲಕ ಹಲವರ ಗಮನ ಸೆಳೆದಿದ್ದಾರೆ.
ಕುಂದಾಪುರ ತಾಲೂಕಿನ ಕೊಡಪಾಡಿ ಬಳಿ ಬೈಕ್​ ಅಪಘಾತದಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಪ್ರಥಮ ವರ್ಷದ ಪದವಿ ಪರೀಕ್ಷೆ ಬರೆಯಲು ಶಿರೂರಿನಿಂದ ಬೈಕ್​ನಲ್ಲಿ ಬಂದಿದ್ದ ಮಸಾಯಿದ್, ಗಂಗೊಳ್ಳಿಗೆ ತೆರಳಿ ಅಲ್ಲಿಂದ ಸ್ನೇಹಿತ ವಾಜಿದ್​ನನ್ನು ಜೊತೆಗೆ ಕರೆದುಕೊಂಡು ಹೋಗುತ್ತಿದ್ದಾಗ ಕೊಡಪಾಡಿ ಬಳಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಡಿಕ್ಕಿಯಾಗಿದೆ.
ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಗಂಗೊಳ್ಳಿಯ ಆಪತ್ಬಾಂಧವ ಆಂಬುಲೆನ್ಸ್ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ವಿದ್ಯಾರ್ಥಿಗಳು ಆಂಬುಲೆನ್ಸ್​ನಲ್ಲೇ ಭಂಡಾರ್​ಕಾರ್ಸ್​ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಕಾಲೇಜು ಆಡಳಿತ ಅವರಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಟ್ಟಿದೆ. ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗಳಾಗಿರುವುದರಿಂದ ಪರೀಕ್ಷೆ ಬರೆದ ಬಳಿಕ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ.
ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ…

ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​, ಏಷ್ಯಾ ಬುಕ್​ ಆಫ್​ ರೆಕಾರ್ಡ್ಸ್​ ಎರಡರಲ್ಲೂ ದಾಖಲೆ ಬರೆದಳು ಕರ್ನಾಟಕದ ಈ ಹುಡುಗಿ, ಅಮನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 2 =
Remember me
