ಬೆಂಗಳೂರು:ಮಲ್ಲೇಶ್ವರದ ಮಹಾರಾಣಿ ಅಮ್ಮಣ್ಣಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇವರಿಗೆ ಪಿಪಿಇ ಕಿಟ್ ಹಾಕಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡಲಾಗಿತ್ತು.ಕೆಲವು ದಿನಗಳ ಹಿಂದೆ ನಾಲ್ಕು ವಿದ್ಯಾರ್ಥಿನಿಯರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ವಾಸವಿದ್ದ ಈಡಿಗರ ವಿದ್ಯಾರ್ಥಿ ನಿಲಯದಲ್ಲೇ ಬಿಬಿಎಂಪಿ ಕ್ವಾರಂಟೈನ್ ಮಾಡಿತ್ತು. ಇವರು ಬಿ.ಕಾಂ ಮತ್ತು ಬಿಬಿಎಂ ವಿದ್ಯಾರ್ಥಿನಿಯರಾಗಿದ್ದು, ಶುಕ್ರವಾರ ಪರೀಕ್ಷೆ ಬರೆಯಬೇಕಿತ್ತು.
ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಆರೋಗ್ಯ ಅಧಿಕಾರಿಗಳು ಹಾಸ್ಟೆಲ್‌ನಿಂದ ಪಿಪಿಇ ಕಿಟ್ ಧರಿಸಿದ ನಾಲ್ವರು ವಿದ್ಯಾರ್ಥಿನಿಯರನ್ನು ಆಂಬುಲೆನ್ಸ್ ಮೂಲಕ ಶೇಷಾದ್ರಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ಕಲಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿದ್ದ ಪರೀಕ್ಷಾ ಕೇಂದ್ರಕ್ಕೆ ಕರೆತಂದು ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಈ ನಾಲ್ವರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಕಾಲೇಜಿನವರು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿದ್ದರು. ಇತರೆ ವಿದ್ಯಾರ್ಥಿಗಳೊಂದಿಗೆ ಕೂರಲು ಅವಕಾಶ ನೀಡಿರಲಿಲ್ಲ.
ಪರೀಕ್ಷೆ ಮುಗಿದ ಬಳಿಕ ವಾಪಸ್ ಆಂಬುಲೆನ್ಸ್ ಮೂಲಕವೇ ಹಾಸ್ಟೆಲ್‌ಗೆ ಕರೆದೊಯ್ದು ಬಿಬಿಎಂಪಿ ಸಿಬ್ಬಂದಿ ಕ್ವಾರಂಟೈನ್ ಮಾಡಿದ್ದಾರೆ. ಒಟ್ಟಾರೆ ವಿದ್ಯಾರ್ಥಿನಿಯರಿಗೆ ಕರೊನಾ ಬಂದಿದೆ ಎಂಬ ಕಾರಣಕ್ಕೆ ಪರೀಕ್ಷೆಯಿಂದ ವಂಚಿತರಾಗದಂತೆ ನೋಡಿಕೊಂಡ ಬಿಬಿಎಂಪಿ ಸಿಬ್ಬಂದಿಗೆ ವಿದ್ಯಾರ್ಥಿನಿಯರು ಧನ್ಯವಾದ ತಿಳಿಸಿದರು.
ಪರಸ್ತ್ರೀಗೆ ಕಿಸ್​ ಕೊಟ್ಟಿದ್ದಕ್ಕೆ ಪತಿಗೆ ಪಂಚ್​ ಕೊಟ್ಟ ಪತ್ನಿ: ರಿತೀಶ್ ಕಿಸ್​, ಜೆನಿಲಿಯಾ ಜಲಸ್; ನನಗಿಂತ ಪ್ರೀತಿ ಝಿಂಟಾ ಹೆಚ್ಚಾದ್ಲಾ.. ಡಿಶೂಂ ಡಿಶೂಂ!

ಕಾಮೆಡ್​-ಕೆ ಪರೀಕ್ಷಾರ್ಥಿಗಳಿಗೆ ಗುಡ್​ನ್ಯೂಸ್​: ಕೌನ್ಸೆಲಿಂಗ್​ ವೇಳಾಪಟ್ಟಿ ಗೊಂದಲ ಈ ವರ್ಷ ಇರಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − two =
Remember me
