ನವದೆಹಲಿ:ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳು, ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿಗಳು), ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಳು (ಎನ್‌ಐಟಿ), ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು (ಐಐಐಟಿ), ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ)ಗಳಲ್ಲಿ 2018ರಿಂದ 2023ರವರೆಗೆ 98 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತಾಗಿ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳು (IISER), ಶಿಕ್ಷಣ ಸಚಿವಾಲಯ ಮಂಗಳವಾರ ರಾಜ್ಯಸಭೆಗೆ ತಿಳಿಸಿದೆ. ಅತ್ಯಧಿಕ ಸಂಖ್ಯೆಯ ಆತ್ಮಹತ್ಯೆಗಳು ಪ್ರೀಮಿಯರ್ ಇಂಜಿನಿಯರಿಂಗ್ ಸಂಸ್ಥೆಗಳಿಂದ ವರದಿಯಾಗಿದ್ದು ಐಐಟಿಗಳಿಂದ ಬರೋಬ್ಬರಿ 8,139 ವಿದ್ಯಾರ್ಥಿಗಳು ಡ್ರಾಪ್​ಔಟ್​ ಆಗಿದ್ದು, ಮೊದಲ ಸ್ಥಾನದಲ್ಲಿದೆ. ಸಂಸತ್ತಿನ ಪ್ರತಿಕ್ರಿಯೆಯ ಪ್ರಕಾರ, ಡ್ರಾಪ್ಔಟ್​ಗಳು ಸ್ನಾತಕೋತ್ತರ ಅಥವಾ ಸಂಶೋಧನಾ ಕಾರ್ಯಕ್ರಮಗಳಿಂದ ಬಂದವರಾಗಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಲ್ಲಿ 28 ಇತರೆ ಹಿಂದುಳಿದ ವರ್ಗದವರಾಗಿದ್ದು, ಒಂಬತ್ತು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, ಮೂವರು ಪರಿಶಿಷ್ಟ ಪಂಗಡ ಮತ್ತು ನಾಲ್ವರು ಅಲ್ಪಸಂಖ್ಯಾತ ಸಮುದಾಯದವರಾಗಿದ್ದಾರೆ. ಮೂವತ್ತೊಂಬತ್ತು ಆತ್ಮಹತ್ಯೆಗಳು ಐಐಟಿಗಳಲ್ಲಿ ನಡೆದಿದ್ದು ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 25 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಗ್ಯೂ, ಹಲವಾರು ಕೇಂದ್ರೀಯ ವಿಶ್ವವಿದ್ಯಾನಿಲಯಗಳು IITಗಳಿಗಿಂತ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿವೆ.
2018ರಲ್ಲಿ, ಐಐಟಿಗಳು ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ತಲಾ ಎಂಟು ವಿದ್ಯಾರ್ಥಿಗಳಂತೆ ಎಲ್ಲಾ ಸಂಸ್ಥೆಗಳಲ್ಲಿ ಒಟ್ಟು 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019ರಲ್ಲಿ, NIT ಗಳ ಜತೆಗೆ IITಗಳು ಮತ್ತೊಮ್ಮೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ಆತ್ಮಹತ್ಯೆಗಳನ್ನು ಕಂಡಿವೆ. ಆ ವರ್ಷ ಒಟ್ಟು 19 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. 2020 ಮತ್ತು 2021ರ ಕೋವಿಡ್ ಸಾಂಕ್ರಾಮಿಕ ವರ್ಷಗಳಲ್ಲಿ ಕ್ಯಾಂಪಸ್‌ಗಳನ್ನು ಮುಚ್ಚಿದ್ದರಿಂದ ಮತ್ತು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದರಿಂದ ಆತ್ಮಹತ್ಯೆ ದರಗಳು ಕಡಿಮೆಯಾಗಿದೆ. ಆದಾಗ್ಯೂ, 2022ರಲ್ಲಿ ಸಂಸ್ಥೆಗಳು ಪುನರಾರಂಭಗೊಂಡ ನಂತರ ಆತ್ಮಹತ್ಯೆ ಸಂಖ್ಯೆ ಮತ್ತೇ ಹೆಚ್ಚಾಗಿದ್ದವು. ಆ ವರ್ಷ, 24 ವಿದ್ಯಾರ್ಥಿಗಳು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದು IITಗಳು ಮತ್ತೊಮ್ಮೆ ಅತಿ ಹೆಚ್ಚು ಸಾವಿನ ಸಂಖ್ಯೆಯನ್ನು ಕಂಡಿವೆ.
2023ರಲ್ಲಿ 20 ಆತ್ಮಹತ್ಯೆಗಳು ನಡೆದಿದ್ದು, ಕೊನೆಯ ಸಾವು ಜುಲೈ 26ರಂದು ನಡೆದಿದೆ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳ ಸಾವಿಗೆ ಸಂಬಂಧಪಟ್ಟ ಪ್ರಶ್ನೆಯನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಕೇರಳದ ಸಂಸದ ವಿ ಶಿವದಾಸನ್ ಕೇಳಿದ್ದರು.(ಏಜೆನ್ಸೀಸ್)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen + two =
Remember me
