ದಕ್ಷಿಣ ಕನ್ನಡ:ಮೆಟ್ರಿಕ್‌ಪೂರ್ವ ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳ ಮೇಲೆ ಅಡುಗೆ ಸಿಬ್ಬಂದಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲದ ಪಂಚಲಿಂಗೇಶ್ವರ ಮತ್ತು ಗಜಾನನ ಶಾಲೆಯಲ್ಲಿ ನಡೆದಿದೆ.
ಅಡುಗೆ ಸಿಬ್ಬಂದಿ ಪಿ. ಮಹಮ್ಮದ್ ನಜೀತ್ ಎಂಬುವರು ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಖಂಡಿಸಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಅಕ್ಷತಾ ಪೈ ವಿದ್ಯಾರ್ಥಿಗಳ ಅಹವಾಲು ಆಲಿಸಿದ್ದು, ಮೇಲಧಿಕಾರಿಗಳ ಗಮನಕ್ಕೆ ತಂದು ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳು ಫೆಬ್ರವರಿ 15ರ ಒಳಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + twelve =
Remember me
