ತುಮಕೂರು:ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ‌ ಲವ್ವಿ ಡವ್ವಿ ನಡೆಯುತ್ತಿದೆ ಎಂದು ಆರೋಪ ಮಾಡಿರುವ ವಿದ್ಯಾರ್ಥಿಗಳು ರೊಚ್ಚಿಗೆದ್ದು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ವಿಭಾಗದ ಉಪನ್ಯಾಸಕ ರಂಗನಾಥ್ ವಿದ್ಯಾರ್ಥಿನಿಯೊಂದಿಗೆ ಮೊಬೈಲ್ ಚಾಟಿಂಗ್ ಹಾಗೂ ಕಾರಿನಲ್ಲಿ ಸುತ್ತಾಟ ನಡೆಸಿದ್ದಾನೆ. ಉಪನ್ಯಾಸಕ ಹಾಗೂ ವಿದ್ಯಾರ್ಥಿನಿ ಜತೆಗಿರುವ ಪೋಟೋ ಕೂಡಾ ವೈರಲ್ ಆಗಿದೆ. ಇದಾದ ಬೆನ್ನಲ್ಲೇ ರೊಚ್ಚಿಗೆದ್ದ ಕಾಲೇಜು ವಿದ್ಯಾರ್ಥಿಗಳು ಉಪನ್ಯಾಸಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಿಪಟೂರು ಪೊಲೀಸರು ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಮನವೊಲಿಕೆಗೆ ಪ್ರಯತ್ನಿಸಿದ್ದಾರೆ.
ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮೂರು ಆನೆಗಳು ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 11 =
Remember me
