ಬೆಂಗಳೂರು:ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅನುಪಮ ಕಾಲೇಜ್ ಆಫ್ ​ಮ್ಯಾನೇಜ್ಮೆಂಟ್ ಆ್ಯಂಡ್ ಸೈನ್ಸ್ ಪದವಿ ಕಾಲೇಜಿನ ರಾಷ್ಟ್ರೀಯ ಯುವ ದಿನವನ್ನು ಸ್ಮರಣೀಯವಾಗಿ ಆಚರಿಸಿದೆ.
ಪದವಿ ವಿದ್ಯಾರ್ಥಿಗಳಿಗೆ “ನಮ್ಮ ಹಬ್ಬ ನಮ್ಮ ಸಂಸ್ಕೃತಿ” ಎಂಬ ಶೀರ್ಷಿಕೆಯಡಿಯಲ್ಲಿ ಅಂತರ್ ತರಗತಿ ಸ್ಪರ್ಧೆಗಳನ್ನು ಆಯೋಜಿಸಿತ್ತು. ಒಂದೊಂದು ತರಗತಿಗೂ ಒಂದೊಂದು ಹಬ್ಬದ ಆಚರಣೆಯ ರೀತಿ, ಅದರ ಹಿಂದಿನ ಮಹತ್ವ ಮತ್ತು ಉದ್ದೇಶಗಳ ಆಧಾರದ ಮೇಲೆ ಆಚರಿಸಲು ಸೂಚಿಸಲಾಗಿತ್ತು. ಅದರಂತೆ ವಿದ್ಯಾರ್ಥಿಗಳು ತಮ್ಮ ತರಗತಿಗೆ ಸೂಚಿಸಿದ್ದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದ್ದಾರೆ.
ಇಂದಿನ ಯುವ ಪೀಳಿಗೆಗೆ ಭಾರತೀಯ ಸಂಸ್ಕೃತಿ ಹಾಗೂ ಹಬ್ಬ, ಹರಿದಿನಗಳ ಮಹತ್ವದ ಅರಿವನ್ನು ಜಾಗೃತಗೊಳಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಅರ್ಥಪೂರ್ಣವಾಗಿ ಯುವ ದಿನಾಚರಣೆಯನ್ನು ಆಚರಿಸಲು ಸಾಧ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ.ಸಿಂಧು ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × five =
Remember me
