ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ಮಾರ್ಗದಲ್ಲಿ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್​ ಸೇವೆ ಒದಗಿಸಿ ಎಂದು ಅನೇಕ ಬಾರಿ ಮನವಿ ಮಾಡಿದರು ಸಹ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳ ಗುಂಪು, ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದೆ.
ಇದನ್ನೂ ಓದಿ:ಯುವಜನರು ತಪ್ಪನ್ನು ಸರಿಪಡಿಸುವ ಕೆಲಸ ಮಾಡಲಿ: ರಾಜ್ಯ ಇಂಜಿನಿಯರ್ ಸಂಘದ ಗೌರವಾಧ್ಯಕ್ಷ ಡಿ.ಎಸ್.ದೇವರಾಜು ಕಿವಿಮಾತು
ಹೆಚ್ಚುವರಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿದ ವಿದ್ಯಾರ್ಥಿಗಳು, ರಸ್ತೆಗಿಳಿದ ಬಸ್​ ಅನ್ನು ತಡೆದು, ಬಸ್​ ಡಿಪ್ಪೋ ಮತ್ತು ಸಾರಿಗೆ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಎಬಿವಿಪಿ ಸಂಘಟನೆ ಮತ್ತು ವಿದ್ಯಾರ್ಥಿಗಳಿಂದ ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿದ್ದು, ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ಮಾರ್ಗಕ್ಕೆ ಹೆಚ್ಚುವರಿ ಬಸ್ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.
ಬಸ್​ ಬಿಡುವಂತೆ ಈ ಹಿಂದೆ ಹಲವು ಬಾರಿ ಮನವಿ ಮಾಡಿದರು ಕೂಡ ಯಾವುದೇ ಕ್ರಮ ಕೈಗೊಳ್ಳದ ಡಿಪೋ ಮ್ಯಾನೇಜರ್ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಕೆಎಸ್ಆರ್​ಟಿಸಿ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ:G Parameshwar Reaction On Siddaganga Mutt Incident | ಸಿದ್ದಗಂಗಾ ಮಠದಲ್ಲಿ ಇಂತಹ ಘಟನೆ ನಡೆಯಬಾರದಿತ್ತು!
200 ರಿಂದ 300 ವಿದ್ಯಾರ್ಥಿಗಳು ಸಂಚರಿಸುವ ಮಾರ್ಗಕ್ಕೆ ಹೆಚ್ಚುವರಿ ಬಸ್​ ಅಗತ್ಯವಿದೆ ಎಂದು ಹೇಳಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರುವವರೆಗೂ ಬಸ್ ಸಂಚರಿಸಲು ಬಿಡುವುದಿಲ್ಲ ಎಂದು ತಡೆಹಿಡಿದು ಪ್ರತಿಭಟಿಸಿದ್ದಾರೆ.
ಬಿಜೆಪಿ ವಿರುದ್ಧ ದಾಖಲೆ ಬಿಡುಗಡೆಗೆ ಡಿಕೆಶಿ ಸಜ್ಜು!; ಇನ್ನೆರೆಡು ದಿನಗಳಲ್ಲಿ ಅಚ್ಚರಿ ಡಾಕ್ಯುಮೆಂಟ್ ರಿಲೀಸ್​​ ಮಾಡುವೆ: ಡಿಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − five =
Remember me
