ಮಂಡ್ಯ:ಸಾರಿಗೆ ಇಲಾಖೆ ವಿರುದ್ದ ವಿದ್ಯಾರ್ಥಿಗಳು ಮಂಡ್ಯ KRSTC ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಶುರು ಮಾಡಿದ್ದಾರೆ. ಸಮರ್ಪಕ ಬಸ್ ವ್ಯವಸ್ಥೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಧರಣಿ.ಕುಳಿತಿದ್ದು ಮಳವಳ್ಳಿ- ದುಗ್ಗನಹಳ್ಳಿ, ಕಾಡಕೊತ್ತನಹಳ್ಳಿ ಮಾರ್ಗವಾಗಿ ಮಂಡ್ಯಕ್ಕೆ ಹೆಚ್ಚುವರಿ ಬಸ್​ಗಾಗಿ ಆಗ್ರಹಿಸುತ್ತಿದ್ದಾರೆ.
ಸಮರ್ಪಕವಾಗಿ ಬಸ್ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಹಲವು ಬಾರಿ ಮನವಿ ಕೊಟ್ಟರೂ ಇಲಾಖೆ ಹೆಚ್ಚುವರಿ ಬಸ್ ನೀಡಿಲ್ಲ. ಹೀಗಾಗಿ ನಿತ್ಯವೂ ಶಾಲೆಗೆ ತೆರಳಬೇಕಿರುವ ವಿದ್ಯಾರ್ಥಿಗಳಿಗೆ ಸಂಕಷ್ಟ ಉಂಟಾಗಿದೆ. ಇದರಿಂದಾಗಿ ತಮ್ಮ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿದೆ ಎಂದು ಸಾರಿಗೆ ಇಲಾಖೆ ವಿರುದ್ದ ವಿದ್ಯಾರ್ಥಿಗಳು ಧರಣಿ ಕುಳಿತು ಆಕ್ರೋಶ ಹೊರಹಾಕುತ್ತಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ KSRTC ಡಿಸಿ, ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಮನವಿಯನ್ನು ಸ್ವೀಕರಿಸಿದ್ದಾರೆ. ತಕ್ಷಣವೇ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದು ಇವರ ಪ್ರತಿಭಟನೆಗೆ ಸಾರಿಗೆ ಅಧಿಕಾರಿಗಳು ಮಣಿದಿದ್ದಾರೆ. ಸದ್ಯಕ್ಕೆ ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ಭರವಸೆ KSRTC ಡಿಸಿ ನಾಗರಾಜು ಕೊಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 3 =
Remember me
