ಉಡುಪಿ:ನಗರದ ಹೊರ ವಲಯದ ಮಾರ್ಪಳ್ಳಿ ಎಂಬಲ್ಲಿ ಸ್ವತಃ ಎಸ್‌ಐ ಬಾವಿಗೆ ಇಳಿದು ವೃದ್ಧೆಯನ್ನು ರಕ್ಷಿಸಿದ ಘಟನೆ ಗುರುವಾರ ನಡೆದಿದೆ.
ಕುಕ್ಕಿಕಟ್ಟೆಯ ವೃದ್ಧೆಯೊಬ್ಬರು ಮನೆಯ ಬಾವಿಗೆ ಆಕಸ್ಮಿಕವಾಗಿ ಬಿದ್ದು, ಜೀವನ್ಮರಣದ ಸ್ಥಿತಿಯಲ್ಲಿದ್ದರು. ಮಾಹಿತಿ ತಿಳಿದು ಆಗಮಿಸಿದ  ನಗರ ಠಾಣೆ ಪಿ.ಎಸ್.ಐ ಸದಾಶಿವ ಗವರೋಜಿ, ಅಗ್ನಿಶಾಮಕ ದಳದ ಸಿಬ್ಬಂದಿ ಜತೆಗೆ ತಾನೂ ಬಾವಿಗೆ ಇಳಿದು ರಕ್ಷಣಾ ಕಾರ್ಯಾಚರಣೆಗೆ ಸಹಕರಿಸಿದರು.
ಇದನ್ನೂ ಓದಿ:ಕಲ್ಪತರು ನಾಡಿನಲ್ಲಿ ರಾಮಮಂದಿರ ಸಂಭ್ರಮ ; ರಾಮನ ಹೆಸರಲ್ಲಿ ಮಠ, ಮಂದಿರಗಳಲ್ಲಿ ವಿಶೇಷ ಪೂಜೆ
ಎಸ್‌ಐ ಸದಾಶಿವ, ಅಗ್ನಿಶಾಮಕ ದಳದ ಸಿಬ್ಬಂದಿ ವಿನಾಯಕ್ ಹಾಗೂ ಸ್ಥಳೀಯ ಆಟೋ ಚಾಲಕ ರಾಜೇಶ್ ನಾಯಕ್ ವೃದ್ಧೆಗೆ ಹಗ್ಗ ಕಟ್ಟಿ ಮೇಲಕ್ಕೆ ಕರೆತಂದರು. ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ.
ತುರ್ತು ಜೀವರಕ್ಷಣೆ ಕಾರ್ಯಚರಣೆಯಲ್ಲಿ ಸಾಹಸ ಮೆರೆದಿರುವ ಜೀವರಕ್ಷಕರಿಗೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಗಿದೆ. ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅಭಿನಂದನೆ ಸಲ್ಲಿಸಿದ್ದಾರೆ.
ಮೊಟ್ಟೆಯೊಳಗಿದ್ದ ಗಿಣಿಮರಿಯ ತೆಗೆದು ಸಾಕಿದರು! ವಿಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
