ಬೆಂಗಳೂರು:ಕಾಂಗ್ರೆಸ್​​ ಸರ್ಕಾರದ 5 ಗ್ಯಾರಂಟಿಯಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ ಫ್ರೀ ಆಗಿ ಬಸ್ ಪ್ರಯಾಣ ಮಾಡುತ್ತಿರೋ ಮಹಿಳೆಯರು ಇದೀಗ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂಪಾಯಿ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಇಂದನಿಂದ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದೆ.
ಕಾಂಗ್ರೆಸ್ ಗ್ಯಾರಂಟಿಗಳ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಿಕ ಹಣ ನೀಡುವ ಗೃಹಲಕ್ಷ್ಮಿ ಯೋಜನೆಯೂ ಒಂದು. ಅತ್ತೆ ಅಥವಾ ಸೊಸೆ ಸೇರಿದಂತೆ ಮನೆಯ ಓರ್ವ ಯಜಮಾನಿಗೆ 2000 ರೂಪಾಯಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನಿಂದ (ಜೂನ್ 27) ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ‌ ತಿಳಿಸಿದ್ದಾರೆ.
ಇದನ್ನೂ ಓದಿ:17ನೇ ವಯಸ್ಸಿನಲ್ಲಿ ಮಧುಮೇಹ ಪತ್ತೆ, 8 ದಿನಗಳಲ್ಲಿ 10 ಕೆಜಿ ತೂಕ ಕಳೆದುಕೊಂಡ ಸ್ಟಾರ್​ ನಟ
ಜೂನ್ 27ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಮುಖ್ಯಮಂತ್ರಿಗಳಿಗೆ ಆಯಪ್ ತೋರಿಸಿ ವಿವರಿಸುತ್ತೇವೆ. ನಂತರ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡಲಾಗುವುದು. ಆಗಸ್ಟ್ 17ರ ನಂತರ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ, ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಲಾಗಿದ್ದು, ಇದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಸಲ್ಲಿಸುವುದು ಎಲ್ಲಿ?:ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್​​​ನಲ್ಲಿ ಆನ್ನೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಾಗಿ ಪ್ರತ್ಯೇಕ ಪೋರ್ಟ​ಲ್​​ ಸಿದ್ಧಪಡಿಸಲಾಗಿದೆ.
ಬೇಕಾಗುವ ದಾಖಲೆಗಳು:
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 7 =
Remember me
