ವಿಜಯವಾಣಿ ಸುದ್ದಿಜಾಲ ಮೈಸೂರು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಭ್ರಷ್ಟಾಚಾರ ಬಯಲಾದ ಬೆನ್ನಲ್ಲೇ ತಾಂತ್ರಿಕ ಸಮಿತಿ 8 ತಿಂಗಳ ಹಿಂದೆಯೇ ಮುಡಾದಲ್ಲಿನ ನಿಯಮಬಾಹಿರ ಕ್ರಮಗಳು, ಆದೇಶಗಳ ಉಲ್ಲಂಘನೆ ಪ್ರಕರಣಗಳು, ಪ್ರಾಧಿಕಾರಕ್ಕೆ ಆಗಿರುವ ಆರ್ಥಿಕ ನಷ್ಟ ಇತ್ಯಾದಿಗಳನ್ನು ದಾಖಲೆ ಸಮೇತ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಮುಡಾ ರಚಿಸಿರುವ ಹಲವು ಬಡಾವಣೆಗಳಲ್ಲಿ ಸಾರ್ವಜನಿಕ ಉದ್ಯಾನ, ನಾಗರಿಕ ಸೌಲಭ್ಯ ನಿವೇಶನಗಳನ್ನು ಕಾಯ್ದಿರಿಸಿಕೊಂಡಿಲ್ಲ. ಬಡಾವಣೆಗಳ ದೃಢೀಕೃತ ನಕ್ಷೆಯೂ ಲಭ್ಯವಿಲ್ಲ. ಬಡಾವಣೆಗಳಿಗೆ ಅಧಿಕೃತವಾಗಿ ಪ್ರಾಧಿಕಾರದಿಂದ ಅನುಮೋದನೆ ಪಡೆದುಕೊಂಡಿಲ್ಲ ಎಂಬ ಸಂಗತಿಗಳು ತಾಂತ್ರಿಕ ಸಮಿತಿ ವರದಿಯಲ್ಲಿ ಗೊತ್ತಾಗಿದೆ. ತಾಂತ್ರಿಕ ಸಮಿತಿಯು 8 ತಿಂಗಳ ಹಿಂದೆಯೇ ಮುಡಾ ಅಕ್ರಮಗಳನ್ನು ಪತ್ತೆ ಹಚ್ಚಿತ್ತು. ಟಿ.ವಿ.ಮುರಳಿ ನೇತೃತ್ವದಲ್ಲಿ ಸಮಿತಿಯು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗೆ 2023ರ ನವೆಂಬರ್ 3ರಂದೇ ವರದಿ ಸಲ್ಲಿಸಿತ್ತು. ಈ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿ ತಿಂಗಳುಗಳೇ ಕಳೆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೇ, ಭ್ರಷ್ಟಾಚಾರ ಕುರಿತು ವರದಿ ತನ್ನ ಕೈಯಲ್ಲಿದ್ದರೂ ಮತ್ತೊಂದು ಸಮಿತಿಯನ್ನು ರಚಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಆಗಲೇ ಬದಲಿ ನಿವೇಶನ ಪತ್ತೆ !:ತಾಂತ್ರಿಕ ಸಮಿತಿಯು ಈ ಹಿಂದೆಯೇ ಮಧ್ಯಂತರ ಮತ್ತು ಬಿಡಿ ನಿವೇಶನಗಳನ್ನು ಬದಲಿ ನಿವೇಶನಗಳನ್ನಾಗಿ ಹಂಚಿಕೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ವರದಿ ಮಾಡಿದೆ. ಅನುಮೋದಿತ ಯೋಜನೆಯ ವ್ಯಾಪ್ತಿ ಮೀರಿ ಬಡಾವಣೆ ನಿರ್ವಿುಸಿರುವ ಮಾಹಿತಿ ಸಂಗ್ರಹಿಸಿ ಪರಿಶೀಲಿಸಿ ಸಭೆಗೆ ಮಂಡಿಸಿಲ್ಲ. ಪ್ರಾಧಿಕಾರದಲ್ಲಿಯೇ ನಿವೇಶನ ಹಂಚಿಕೆ ಕುರಿತು ಪೂರ್ಣ ಮಾಹಿತಿ ಲಭ್ಯವಿದ್ದರೂ ಪರಿಶೀಲಿಸದೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಮೂಲಕ ಕಾನೂನಾತ್ಮಕ ಗೊಂದಲಗಳಿಗೆ ಅವಕಾಶ ಕಲ್ಪಿಸಿರುವುದನ್ನು ತಾಂತ್ರಿಕ ಸಮಿತಿ ಪತ್ತೆ ಹಚ್ಚಿದೆ. ಪ್ರಾಧಿಕಾರದ ವಸತಿ ಯೋಜನೆಗಳಲ್ಲಿ ನಿವೇಶನಗಳನ್ನು ರಚಿಸಿದ ನಂತರ ಒಟ್ಟಾರೆ ನಿವೇಶನಗಳನ್ನು ವಹಿಯಲ್ಲಿ ನಮೂದಿಸಿಲ್ಲ. ಬದಲಿಗೆ ಮಂಜೂರಾತಿಗಾಗಿ ಅಧಿಸೂಚಿಸಲಾದ ಮಧ್ಯಂತರ ನಿವೇಶನಗಳ ಹಂಚಿಕೆಯ ನಂತರ ವಹಿಯಲ್ಲಿ ಅಂತಹ ಮಂಜೂರಾದ ನಿವೇಶನಗಳ ವಿವರಗಳನ್ನು ನಮೂದಿ ಸುತ್ತಿದೆ. ಮೂಲೆ ನಿವೇಶನಗಳ ವಿವರಗಳನ್ನು ಮುಖ್ಯ ವಹಿಯಲ್ಲಿ ನಮೂದಿಸದೇ ಇರುವುದನ್ನೂ ಸಮಿತಿಯು ಪತ್ತೆ ಮಾಡಿದೆ.
ಹರಾಜು ಪ್ರಕ್ರಿಯೆ ಪ್ರತ್ಯೇಕವಾಗಿ ಕೈಗೊಂಡ ನಂತರ ಹರಾಜುಗೊಂಡ ನಿವೇಶನಗಳಿಗೆ ಸಂಬಂಧಿಸಿದಂತೆ ಮಾತ್ರ ಎಲ್ಲ ಪ್ರಕ್ರಿಯೆಗಳನ್ನು ವಹಿಯಲ್ಲಿ ನಮೂದಿಸಿರುವುದನ್ನು ಸಮಿತಿಯು ಪತ್ತೆ ಹಚ್ಚಿದೆ. ಆದರೆ ಹರಾಜಿಗಾಗಿ ಬಾಕಿ ಇರುವ ಮೂಲೆ, ಬಿಡಿ, ಮಧ್ಯಂತರ ನಿವೇಶನಗಳ ಮಾಹಿತಿಯು ಪ್ರತ್ಯೇಕವಾಗಿ ಯಾವುದೇ ವಹಿಗಳಲ್ಲಿ ನಮೂದಿಸಿಲ್ಲ ಮತ್ತು ಇದರ ಮಾಹಿತಿಯೂ ಲಭ್ಯವಿಲ್ಲ ಎಂದು ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಕೆಲವು ವಸತಿ ಯೋಜನೆಗಳಲ್ಲಿ ನಿವೇಶನ ಸಂಖ್ಯೆ 1ರಿಂದ ಪ್ರಾರಂಭಿಸಿ ಅಂತಿಮ ನಿವೇಶನಗಳ ಸಂಖ್ಯೆಯನ್ನು ನಮೂದಿಸಿ ವಹಿಯಲ್ಲಿ ನಿರ್ವಹಿಸಲಾಗುತ್ತಿದೆ. ಉಳಿದ ಯೋಜನೆಗಳಲ್ಲಿ ಸದರಿ ಕ್ರಮವನ್ನು ಸರಿಯಾಗಿ ನಿರ್ವಹಿಸಿಲ್ಲ. ಹಾಗಾಗಿ ಹರಾಜಿಗಾಗಿ, ಹಂಚಿಕೆಗಾಗಿ ಬಾಕಿ ಇರುವ ನಿವೇಶನಗಳ ವಿವರಗಳು ವಹಿಗಳಿಂದ ಲಭ್ಯವಾಗುವುದಿಲ್ಲ ಎಂಬ ಅಂಶವನ್ನು ತಿಳಿಸಿದೆ. ರದ್ದತಿ ನಿವೇಶನಗಳ ವಹಿ ಎಂಬ ಕಡತ ತೆರೆಯಲಾಗಿದೆ. ಬಡಾವಣೆವಾರು ರದ್ದತಿಯಾದ ನಿವೇಶನಗಳ ಅಳತೆ, ಸಂಖ್ಯೆ ನಮೂದಿಸಿ ವಹಿಯಲ್ಲಿ ವಿವರಗಳನ್ನು ದಾಖಲಿಸಲಾಗಿರುತ್ತದೆ. ಅದರೆ 2000ರ ನವೆಂಬರ್ 24ರಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿನ ಸೂಚನೆಗಳಂತೆ ಬಡಾವಣೆವಾರು ಯಾವುದೇ ವಹಿಗಳನ್ನು ನಿರ್ವಹಿಸಿಲ್ಲ. ಬದಲಿ ನಿವೇಶನ ಹಂಚಿಕೆಯಲ್ಲಿ ಕಾಯ್ದೆ, ನಿಯಮಗಳು ಮತ್ತು ಸರ್ಕಾರದ ಸೂಚನೆಗಳಿಗೆ ವ್ಯತಿರಿಕ್ತವಾಗಿ ಕ್ರಮವಹಿಸುತ್ತಿದೆ ಎಂದು ವರದಿಯಲ್ಲಿ ತಿಳಿಸಿದೆ.
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮುಡಾದಿಂದ ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮವಾಗಿಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಡಾಕ್ಕೆ 1.48 ಲಕ್ಷ ಚ.ಅಡಿ ಕೊಟ್ಟು 38,000 ಚ.ಅಡಿ ಭೂಮಿ ತೆಗೆದುಕೊಂಡಿದ್ದಾರೆ. ಇದರಲ್ಲಿ ಯಾವುದೇ ಅಕ್ರಮವಾಗಿಲ್ಲ. ಬಿಜೆಪಿಯವರು ಅಕ್ರಮ ಎಂದು ಬಿಂಬಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ಪಾರ್ವತಿ ಅವರಿಗೆ ಮುಡಾ ನಿವೇಶನ ಹಂಚಿಕೆ ಅಕ್ರಮ ಎಂದಾದರೆ, ಅವರು ಮುಡಾಗೆ ನೀಡಿರುವ 3.16 ಎಕರೆ ಭೂಮಿಯನ್ನು ವಾಪಸ್ ನೀಡಲಿ. ಅಲ್ಲದೆ, ಈ ಪ್ರಕ್ರಿಯೆಯಲ್ಲಿ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಪಾತ್ರ ಇಲ್ಲದಿದ್ದರೂ, ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ಬೆಂಗಳೂರು:ಮೈಸೂರಿನ ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳೆಲ್ಲವೂ ರಾಜಕೀಯ ಪ್ರೇರಿತವೇ ಹೊರತು ವಾಸ್ತವಿಕ ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ವಿರುದ್ಧ ಮಾತನಾಡಲು ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾತನಾಡುತ್ತಾರೆ ಎಂದು ಹರಿಹಾಯ್ದರು. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಲಿ ಎಂದರು.
ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ತಪ್ಪಿಲ್ಲದಿದ್ದರೆ ಸಿಬಿಐ ತನಿಖೆಗೆ ಒಪ್ಪಿಸಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸವಾಲೆಸೆದರು.

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಬೆಂಗಳೂರಿನ ದಾಸರಹಳ್ಳಿಯ ಬದಲಿಗೆ ಎಂ.ಜಿ.ರಸ್ತೆಯ ನಿವೇಶನ ಹಂಚಿದರೆ ಹೇಗೆ? ಇದೇ ರೀತಿಯ ಅಕ್ರಮ ಮುಡಾದಲ್ಲಿ ಆಗಿದೆ ಎಂದು ಆರ್.ಅಶೋಕ್ ಉದಾಹರಿಸಿದರು. ಮುಡಾ ಭೂಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ ನಂತರವೂ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅರ್ಜಿ ಸಲ್ಲಿಸಿದ ನಂತರ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದರಿಂದ ಮುಡಾಗೆ ನಷ್ಟವಾಗಿದೆ ಎಂದರು.
ಬಿಜೆಪಿಯವರು ಕೇಳುವಂತೆ (ಮೂಡಾ ನಿವೇಶನ ಹಂಚಿಕೆ ವಿಚಾರದಲ್ಲಿ) ಎಲ್ಲ ಪ್ರಕರಣಗಳನ್ನೂ ಸಿಬಿಐಗೆ ಕೊಟ್ಟರೆ ಸ್ಥಳೀಯ ಪೊಲೀಸರಿಗೆ ಕೆಲಸವೇ ಇಲ್ಲದಂತಾಗುತ್ತದೆ. ವಿಧಾನಮಂಡಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಸ್ಪೀಕರ್ ಅನುಮತಿ ಪಡೆದು ಯಾವುದೇ ವಿಷಯವನ್ನು ಪ್ರಸ್ತಾಪಿಸಿದರೂ ಸರ್ಕಾರ ಸಮರ್ಥ ಉತ್ತರ ನೀಡಲಿದೆ.
| ಡಾ.ಜಿ.ಪರಮೇಶ್ವರ ಗೃಹ ಸಚಿವ
ಸಿಎಂ ಪತ್ನಿ ಪಾರ್ವತಮ್ಮ ಅವರ ಹೆಸರನ್ನು ಬಿಜೆಪಿಯವರು ಮಾಧ್ಯಮಗಳ ಮುಂದೆ ತಂದು ತೇಜೋವಧೆ ಮಾಡುತ್ತಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದರೆ, ದಾಖಲೆಯನ್ನು ಮುಂದಿಟ್ಟು ಮಾತನಾಡಲಿ. ಮುಡಾದಲ್ಲಿ 5 ಸಾವಿರ ಕೋಟಿಯಷ್ಟು ಅಕ್ರಮ ನಡೆದಿದ್ದರೆ ಅದೆಲ್ಲವೂ ಬಿಜೆಪಿ ಆಡಳಿತ ಅವಧಿಯಲ್ಲಿ ಆಗಿರುವ ಅಕ್ರಮ.
| ಎಂ. ಲಕ್ಷ್ಮಣ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹಿಂದೂ ಹೇಳಿಕೆಗೆ ಸಿಎಂ ಯೋಗಿ ಆದಿತ್ಯನಾಥ್ ಆಕ್ಷೇಪ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:fourteen + 6 =
Remember me
