ಬೆಂಗಳೂರು:ಗ್ರಾಮ ಪಂಚಾಯತಿ ನೌಕರರ ಸೇವಾ ಭದ್ರತೆ, ಸೇರಿದಂತೆ ಹಲವು ಬೇಡಿಕೆಗಳನ್ನುಈಡೇರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಸಾಧ್ಯವಾದಷ್ಟು ಸೌಲಭ್ಯಗಳನ್ನು ನೀಡಲು ಪ್ರಯತ್ನಿಸುತ್ತಿರುವುದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕಡಿಮೆ ಅವಧಿಯಲ್ಲಿ ಹಂತ ಹಂತವಾಗಿ ಗ್ರಾಮ ಪಂಚಾಯತಿ ನೌಕರರ ಶ್ರೇಯೋಭಿವೃದ್ಧಿಗಾಗಿ ತಮ್ಮ ಸರ್ಕಾರ ಹಲವಾರು ಸೌಲಭ್ಯಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರಲ್ಲದೆ ಸುಮಾರು 11,000 ಮಂದಿ ಗ್ರಾಮ ಪಂಚಾಯತಿ ನೌಕರರಿಗೆ ಸೇವಾ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.ಮೂಲವೇತನ, ವಿಶ್ರಾಂತಿ ವೇತನ, ಆರೋಗ್ಯ ಭತ್ಯೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನೌಕರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಬೇಡಿಕೆಯನ್ನು ಪರಿಶೀಲಿಸುವ ಭರವಸೆಯನ್ನು ನೀಡಿದರು.ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಡಗೌಡ ಹಾಗೂ ಇನ್ನಿತರ ಪದಾಧಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + eighteen =
Remember me
