ಬೆಂಗಳೂರು:ಬೆಂಗಳೂರಿನ ಕೆರೆಗಳ ಸಂರಕ್ಷಣೆ, ಪುನಶ್ಚೇತನಕ್ಕೆ ಆದೇಶ ಹೊರಡಿಸಿದ್ದ ಹೈಕೋರ್ಟ್, ಇದೀಗ ರಾಜ್ಯಾದ್ಯಂತ ಕೆರೆಗಳ ಸಂರಕ್ಷಣೆಗೆ ಮುಂದಾಗಿದ್ದು, ರಾಜ್ಯದಲ್ಲಿರುವ ಕೆರೆಗಳು ಮತ್ತದರ ಸ್ಥಿತಿಗತಿ ಕುರಿತು ಸಮಗ್ರ ವಿವರ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶಿದೆ. ಸಿಟಿಜನ್ ಆಕ್ಷನ್ ಗ್ರೂಪ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು.
ರಾಜ್ಯದಲ್ಲಿ ಎಷ್ಟು ಕೆರೆಗಳಿವೆ ಎಂದು ಸರ್ವೆ ನಡೆಸಲಾಗಿದೆಯೇ? ಆ ಕೆರೆಗಳ ಪೈಕಿ ಎಷ್ಟು ಒತ್ತುವರಿಯಾಗಿವೆ? ಒತ್ತುವರಿ ತೆರವಿಗೆ ಕೈಗೊಂಡ ಕ್ರಮಗಳೇನು? ಕೆರೆಗಳ ಪುನಶ್ಚೇತನಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಒಳಗೊಂಡ ಸಮಗ್ರ ವಿವರಗಳನ್ನು ಫೆ.14ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿತು. ಇದೇ ವೇಳೆ, ರಾಜ್ಯದಲ್ಲಿರುವ ಕೆರೆಗಳ ಸಂರಕ್ಷಣೆ ಸಂಬಂಧ 2008ರಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಹೈಕೋರ್ಟ್ ನೀಡಿರುವ ಆದೇಶ ಪಾಲಿಸದ ಸರ್ಕಾರದ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬಾರದು ಎಂದು ಪ್ರಶ್ನಿಸಿದ ಪೀಠ, ಕೆರೆಗಳ ರಕ್ಷಣೆ ಸಂಬಂಧ ಹಿಂದಿನ ಆದೇಶ ಪಾಲನೆ ಮಾಡಿರುವ ಬಗ್ಗೆ ಸರ್ಕಾರ ಹಾಗೂ ಬಿಬಿಎಂಪಿ ಪ್ರಮಾಣಪತ್ರ ಸಲ್ಲಿಸಬೇಕೆಂದು ತಾಕೀತು ಮಾಡಿ ವಿಚಾರಣೆಯನ್ನು ಫೆ.17ಕ್ಕೆ ಮುಂದೂಡಿತು.
ಕೋರ್ಟ್ ಬೇಸರ: ಕೆರೆಗಳ ಸಂರಕ್ಷಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಲ್ಲಿಸಿದ ಪ್ರಮಾಣಪತ್ರದಲ್ಲಿ, ಹಿಂದೆ ಚಾಲ್ತಿಯಲ್ಲಿದ್ದ ಕೆರೆ ಅಭಿವೃದ್ಧಿ ಪ್ರಾಧಿಕಾರ ರದ್ದುಪಡಿಸಿ ಅದರ ಕೆಲಸವನ್ನು ಸಣ್ಣ ನೀರಾವರಿ ಇಲಾಖೆಯಲ್ಲಿ ವಿಲೀನಗೊಳಿಸಲಾಗಿದೆ. ಅದರಿಂದ ಕೆರೆಗಳ ರಕ್ಷಣೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದೆ ಎಂಬ ಅಂಶವನ್ನು ನ್ಯಾಯಪೀಠ ಗಮನಿಸಿತು. ರಾಜ್ಯ, ಜಿಲ್ಲಾಮಟ್ಟದ ಸಮಿತಿ ಎಷ್ಟು ಸಭೆಗಳನ್ನು ನಡೆಸಿವೆ, ಕೆರೆಗಳ ಸಂರಕ್ಷಣೆಗೆ ಅವು ಕೈಗೊಂಡ ಕ್ರಮಗಳೇನು ಎಂದು ಪ್ರಶ್ನಿಸಿದ ಪೀಠ, 15 ಜಿಲ್ಲೆಗಳಲ್ಲಿ ಮಾತ್ರ ಜಿಲ್ಲಾ ಸಮಿತಿಗಳಿವೆ. ಅವೂ ಕೂಡ 7 ವರ್ಷಗಳಲ್ಲಿ ಕೆರೆಗಳ ರಕ್ಷಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಚಾರದಲ್ಲಿ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ತೋರುತ್ತಿರುವಂತಿದೆ ಎಂದು ಬೇಸರ ವ್ಯಕ್ತಪಡಿಸಿತು.
ರಾಜ್ಯದಲ್ಲಿ ಎಷ್ಟು ಕೆರೆಗಳಿದ್ದವು, ಈಗ ಎಷ್ಟು ಅಸ್ತಿತ್ವದಲ್ಲಿವೆ, ಎಷ್ಟು ನಾಪತ್ತೆ ಯಾಗಿವೆ, ಎಷ್ಟು ಒತ್ತುವರಿಯಾಗಿವೆ? ವೆಟ್ ಲ್ಯಾಂಡ್ ಸರ್ವೆ ಏಕೆ ನಡೆಸಿಲ್ಲ, ಕೆರೆ ಅಭಿವೃದ್ಧಿ ಪ್ರಾಧಿಕಾರ ಕಲೆ ಹಾಕಿದ್ದ ಅಂಕಿ ಅಂಶ ಎಲ್ಲಿವೆ ಎಂದು ಪ್ರಶ್ನಿಸಿದ ಪೀಠ, ಕೆರೆಗಳ ವಿವರ ಹೊಂದಿರುವ ಕರ್ನಾಟಕ ರಿಮೋಟ್ ಸೆನ್ಸಿಂಗ್ ವರದಿ, 1972ರ ಸರ್ವೆ ಆಫ್ ಇಂಡಿಯಾದ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
