ಬೆಂಗಳೂರು:ವಿನಯ ಸಾಮರಸ್ಯ ಯೋಜನೆ ಯಡಿ ರಾಜ್ಯದಲ್ಲಿ ಅಸ್ಪಶ್ಯತೆ ಮುಕ್ತ ಗ್ರಾಮ ಪಂಚಾಯಿತಿಗಳಿಗೆ ವಿಶೇಷ ಅನುದಾನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಮಗುವೊಂದು ದೇವಸ್ಥಾನಕ್ಕೆ ತೆರಳಿದ್ದಕ್ಕೆ 25 ಸಾವಿರ ದಂಡ ವಿಧಿಸಿದ ಘಟನೆ ಹಿನ್ನೆಲೆಯಲ್ಲಿ ಆ ಮಗುವನ್ನು ದತ್ತು ಪಡೆದು ಶಿಕ್ಷಣದ ವೆಚ್ಚವನ್ನು ಸರ್ಕಾರ ಭರಿಸುತ್ತಿದೆ. ಅದಕ್ಕಾಗಿಯೇ ವಿನಯ ಸಾಮರಸ್ಯ ಯೋಜನೆ ರೂಪಿತವಾಗಿದೆ ಎಂದರು. ಅಸ್ಪಶ್ಯತೆ ಬಗ್ಗೆ ರಾಜ್ಯದಲ್ಲಿ ಜನಜಾಗೃತಿ ಮೂಡಿಸಲು ಗ್ರಾಮ ಮಟ್ಟದಲ್ಲೂ ಕಾರ್ಯಕಮ ರೂಪಿಸಲಾಗುವುದು. ಸಿಎಂ ಮತ್ತು ಪ್ರಧಾನಿ ಅವರು ಈ ಬಗ್ಗೆ ಸಂದೇಶ ನೀಡಲಿದ್ದಾರೆ.
ಸಂಸದರು, ಶಾಸಕರು, ಗ್ರಾಮ ಪಂಚಾಯಿತಿ ಸದಸ್ಯರು ಸೇರಿ 1 ಲಕ್ಷ ಜನಪ್ರತಿನಿಧಿಗಳು ಸಮಾಜದ ಎಲ್ಲರೂ ಇದಕ್ಕೆ ಕೈಜೋಡಿಸಬೇಕಿದೆ ಎಂದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಅಂಬೇಡ್ಕರ್ ಸ್ಪೂರ್ತಿ ಭವನ ನಿರ್ವಣಕ್ಕೆ ಚಾಲನೆ ನೀಡಲಾಗಿದೆ. ಅವರು ಭೇಟಿ ಕೊಟ್ಟ ಸ್ಥಳಗಳ ಅಭಿವೃದ್ಧಿಗಾಗಿ 25 ಕೋಟಿ ಅನುದಾನದ ಘೊಷಣೆ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ 19 ಸಾವಿರ ಬೋರ್​ವೆಲ್ ಕೊರೆಯಿಸಲು ಕ್ರಮ ಕೈಗೊಳ್ಳಲಾಗಿದೆ. 40 ಲಕ್ಷ ಪರಿಶಿಷ್ಟ ಜಾತಿ ಪಂಗಡದವರಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಭೂ ಒಡೆತನ ಖರೀದಿ ಮಿತಿಯನ್ನು 15 ಲಕ್ಷದಿಂದ 20 ಲಕ್ಷಕ್ಕೆ ಏರಿಸಲಾಗಿದೆ. ಹಿಂದುಳಿದ ವರ್ಗಗಳು ಮತ್ತು ಸಮಾಜಕಲ್ಯಾಣ ಇಲಾಖೆಯಡಿ 806 ವಸತಿ ಶಾಲೆಗಳಿದ್ದು, ಈ ಪೈಕಿ ಓಬವ್ವ ಆತ್ಮರಕ್ಷಣೆ ಕಲೆಯನ್ನು (ಕರಾಟೆ) 1,704 ವಸತಿನಿಲಯಗಳಲ್ಲಿ ಕಲಿಸಲಾಗುತ್ತಿದೆ ಎಂದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಎಸ್​ಸಿ ಮೋರ್ಚಾ ರಾಜ್ಯ ಅಧ್ಯಕ್ಷರು ಛಲವಾದಿ ನಾರಾಯಣ ಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.
ಮಹಿಳಾ ಸಹೋದ್ಯೋಗಿಗಳ ಜತೆ ಅಸಭ್ಯ ವರ್ತನೆ; ಕಾಲೇಜು ಆವರಣದಲ್ಲೇ ಉಪನ್ಯಾಸಕನಿಗೆ ಧರ್ಮದೇಟು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + five =
Remember me
