ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ದಿಡೀರನೇ ದೆಹಲಿಗೆ ಹೊರಟಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಸಂಜೆ ನೀಡಿರುವ ಆಹ್ವಾನದ ಮೇರೆಗೆ ಯಡಿಯೂರಪ್ಪ ಅವರು ಭಾನುವಾರ ಬೆಳಗ್ಗೆ 8.20ಕ್ಕೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದು, ಯಾವ ಕಾರಣಕ್ಕಾಗಿ ಈ ಬುಲಾವ್ ಬಂದಿದೆ ಎಂಬುದರ ಕುರಿತು ಎಲ್ಲರಲ್ಲಿ ಕುತೂಹಲ ಗರಿಗೆದರಿದೆ.
ಅಮಿತ್ ಶಾ ಅವರು ಜ. 16 ಮತ್ತು 17ರಂದು ಕರ್ನಾಟಕದಲ್ಲಿ ಪ್ರವಾಸ ಮಾಡಲಿದ್ದು, ಅದಕ್ಕೂ ಮುನ್ನ ಯಡಿಯೂರಪ್ಪ ಕೈಗೊಳ್ಳುತ್ತಿರುವ ಈ ದೆಹಲಿ ಯಾತ್ರೆಗೆ ಅತ್ಯಂತ ಮಹತ್ವ ಬಂದಿದೆ. ಕಳೆದ ಹಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟದ ವಿಸ್ತರಣೆ ಕುರಿತು ಮಾತುಕತೆ ನಡೆಸುವುದಕ್ಕಾಗಿ ಅಮಿತ್ ಶಾ ಅವರು ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆದಿರಬಹುದು ಎಂದು ಹೇಳಲಾಗುತ್ತಿದೆ. ಬಸವಕಲ್ಯಾಣ, ಮಸ್ಕಿ ವಿಧಾನಸಭೆ ಕ್ಷೇತ್ರಗಳಲ್ಲಿ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಕೂಡ ಇಬ್ಬರೂ ನಾಯಕರು ಚರ್ಚೆ ನಡೆಸಬಹುದು ಎನ್ನಲಾಗಿದೆ.
ಇದನ್ನೂ ಓದಿ:ಹೀರೋಗಳು ಏನಂತಾರೆ? … ಓಟಿಟಿಯಲ್ಲಿ ಚಿತ್ರ ಬಿಡುಗಡೆಗೆ ಸ್ಟಾರ್‌ಗಳ ನಿಲುವೇನು?
ಸಚಿವ ಸಂಪುಟ ವಿಸ್ತರಣೆಗೆ ಅಥವಾ ಪುನಾರಚನೆಗೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರು ಕೆಲವು ತಿಂಗಳುಗಳ ಹಿಂದೆಯೂ ದೆಹಲಿಗೆ ತೆರಳಿದ್ದರು. ತಮ್ಮ ನಿಲುವನ್ನು ಹೈಕಮಾಂಡ್‌ಗೆ ಅರುಹಿದ್ದರು. ಆದರೆ ವಿಸ್ತರಣೆಗಾಗಲಿ, ಪುನರ್‌ರಚನೆಗಾಗಲಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಿಲ್ಲ. ಹಾಗಾಗಿ ಈ ವಿಷಯ ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹೋಗಿತ್ತು. ಒಂದು ವೇಳೆ ನಾಳೆಯ ಭೇಟಿಯ ಸಂದರ್ಭದಲ್ಲಿ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಒಪ್ಪಿಗೆ ಸೂಚಿಸಿದರೆ, ಸಂಕ್ರಾಂತಿಯ ವೇಳೆಗೆ ಈ ಕೆಲಸ ನಿರಾತಂಕವಾಗಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ವಾಟ್ಸ್​ಆ್ಯಪ್​ಗೆ ಬಾಯ್​ ಬಾಯ್​, ಟೆಲಿಗ್ರಾಮ್​ಗೆ ಹಾಯ್​ ಹಾಯ್​: ಯಾಕೆ, ಏನಾಯಿತು?

ಮಗಳ ಅಕ್ರಮ ಸಂಬಂಧವನ್ನು ಒಪ್ಪದ ತಂದೆಯ ಸಜೀವ ದಹನ! ಹೆಂಡತಿ ಮಕ್ಕಳಿಂದಲೇ ನಡೆಯಿತು ದುಷ್ಕೃತ್ಯ

ಕರೊನಾ ಲಸಿಕೆ ಪಡೆದ ಹತ್ತೇ ದಿನಗಳಲ್ಲಿ ಸತ್ತ!; ಸಾವಿಗೆ ಕಾರಣ ವಿಷ ಎಂದಿತ್ತು ಮರಣೋತ್ತರ ಪರೀಕ್ಷೆಯಲ್ಲಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − 5 =
Remember me
