ಬೆಂಗಳೂರು:‘ಗೌರಿ’ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಅವರು ಸುದೀಪ್ ಅವರನ್ನು ಸಂದರ್ಶನ ಮಾಡಿದ್ದಾರೆ. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳನ್ನು ಅವರು ಸುದೀಪ್​ಗೆ ಕೇಳಿದ್ದಾರೆ. ಈ ವೇಳೆ ಅವರು ಯಾರಿಗೆ ಬಾಸ್​​ ಎನ್ನುತ್ತೇವೆ ಎನ್ನುವ ಕುರಿತಾಗಿ ಮಾತನಾಡಿದ್ದಾರೆ.
ʻಗೌರಿ’ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಸಮರ್ಜಿತ್ ಲಂಕೇಶ್ ಅವರು ಕಿಚ್ಚ ಸುದೀಪ್‌ ಅವರಿಗೆ ಸಂದರ್ಶನ ಮಾಡಿದ್ದರು.
A post shared by Baadshah 👑 (@karthikjanani__)

ಯೂಟ್ಯೂಬ್ ಚಾನೆಲ್​​ವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಸುದೀಪ್ ಮಾತನಾಡಿ. ‘ನನ್ನ ನೆಚ್ಚಿನ ಕಲಾವಿದರು ನೀವು, ನಿಮ್ಮ ನೆಚ್ಚಿನ ಕಲಾವಿದರು ಯಾರು?’ ಎಂದು ಕೇಳಿದರು ಸಮರ್ಜಿತ್ ಲಂಕೇಶ್. ಇದಕ್ಕೆ ಸುದೀಪ್ ಅವರು ಉತ್ತರ ನೀಡಿದ್ದಾರೆ. ‘ನನ್ನ ಫೇವರಿಟ್ ಹೀರೋ ವಿಷ್ಣು ಸರ್. ಇದನ್ನು ಸಾಕಷ್ಟು ಬಾರಿ ಹೇಳಿದ್ದೇನೆ. ಜೀವನದಲ್ಲಿ ನಾನು ಇಬ್ಬರಿಗೆ ಮಾತ್ರ ಬಾಸ್ ಎಂದು ಕರೆದಿದ್ದು. ನಮ್ಮ ತಂದೆಗೆ, ಅದನ್ನು ಇವತ್ತಿಗೂ ಕರೆಯುತ್ತೇನೆ. ಹಾಗೂ ವಿಷ್ಣು ಸರ್​ಗೆ. ವಿಷ್ಣು ಅವರ ಪರ್ಸನಾಲಿಟಿ ಸಖತ್ ಇಷ್ಟ. ಅವರ ಗತ್ತು, ಇರೋ ರೀತಿ ಸಖತ್ ಇಷ್ಟ. ಅವರು ಯಾವಾಗಲೂ ನನ್ನ ಫೇವರಿಟ್. ಹಾಗೇ ನನ್ನ ತಂದೆ ಕೂಡ. ಇವರಿಬ್ಬರಿಗೆ ನಾನು ಬಾಸ್‌ ಎಂದು ಕರೆಯುವುದುʼʼಎಂದಿದ್ದಾರೆ ಸುದೀಪ್.
ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 × five =
Remember me
