ಕೋಲಾರ:ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ವಯೋವೃದ್ಧರು ಎಂಬ ಭೇದವೂ ಇದ್ದಂತಿಲ್ಲ. ಏಕೆಂದರೆ ಇಲ್ಲೊಬ್ಬರು ಅಜ್ಜಿ ಖಾತೆ ಬದಲಾವಣೆಗೆ ಅಲೆದಾಡಿ ಸುಸ್ತಾಗಿ ಕೊನೆಗೆ ಅಲ್ಲೇ ಮಲಗಿ ನರಳಾಡುವಂತಾಗಿದೆ.
ಇಂಥದ್ದೊಂದು ದಯನೀಯ ಪ್ರಕರಣ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಕಚೇರಿಯಲ್ಲಿ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಹೊದಲಿ ಗ್ರಾಮದ ನರಸಮ್ಮ ಎಂಬಾಕೆಯೇ ಸಂತ್ರಸ್ತೆ. ಖಾತೆ ಬದಲಾವಣೆ ವಿಚಾರವಾಗಿ ಅಧಿಕಾರಿಗಳು ವಿಳಂಬಧೋರಣೆ ತೋರುತ್ತಿರುವುದರಿಂದ ಈ ಅಜ್ಜಿ ಇಂಥದ್ದೊಂದು ದುರ್ಗತಿ ಅನುಭವಿಸುವಂತಾಗಿದೆ.
ತಹಶೀಲ್ದಾರ್ ಶರೀನ್ ತಾಜ್ ಅವರಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನ ಆಗಿರಲಿಲ್ಲ. ಇಂದು ತಾಲೂಕು ಕಚೇರಿಗೆ ಭೇಟಿ ನೀಡಿದ ಕೋಲಾರ ಉಪ ವಿಭಾಗಾಧಿಕಾರಿ ಆನಂದ್ ಪ್ರಕಾಶ್ ಮೀನಾಗೆ ಮನವಿ ಮಾಡಿಕೊಂಡಿದ್ದು, ಅವರು ತಹಶೀಲ್ದಾರ್ ಶರೀನ್ ತಾಜ್ ಹಾಗೂ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ರಸ್ತೆ ಪಕ್ಕ ನಿಂತಿದ್ದ ಕಾರಿನ ಮೇಲೇ ಮಗುಚಿ ಬಿದ್ದ ಲಾರಿ, ಕಾರಲ್ಲಿದ್ದ ವ್ಯಕ್ತಿ ಸಾವು..
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − two =
Remember me
