ಬೆಳಗಾವಿ:ಸಕ್ಕರೆ ಕಾರ್ಖಾನೆಯ ನೌಕರನೊಬ್ಬ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಸಂಭವಿಸಿದೆ.
ಕೇರಳದ ಮೂಲದ ವಾಮದೇವ ಆತ್ಮಹತ್ಯೆಗೆ ಯತ್ನಿಸಿದವ. ಈತ ರಾಯಬಾಗದ ರೇಣುಕಾ ಸಕ್ಕರೆ ಕಾರ್ಖಾನೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾನೆ.
ರೇಣುಕಾ ಸಕ್ಕರೆ ಕಾರ್ಖಾನೆಯಲ್ಲಿ ನನಗೆ ಆರು ತಿಂಗಳಿಂದ ವೇತನ ನೀಡಿಲ್ಲ. ಜೀವನ ನಡೆಸುವುದೇ ದುಸ್ತರವಾಗಿದೆ. ಕಾರ್ಖಾನೆಯವರು ಅನ್ಯಾಯ ಮಾಡುತ್ತಿದ್ದಾರೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ನ್ಯಾಯ ಕೊಡಿಸಲಿಲ್ಲ ಎಂಬುದು ವಾಮದೇವನ ಆರೋಪ.
ವೇತನ ಸಿಗದೆ ಕಂಗಾಲಾಗಿದ್ದ ವಾಮದೇವ ಜಿಗುಪ್ಸೆಗೊಂಡು ಬೆಳಗಾವಿ ಡಿಸಿ ಕಚೇರಿ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ. ಅಷ್ಟರಲ್ಲಿ ಸ್ಥಳಕ್ಕೆ ತೆರಳಿದ ಮಾರ್ಕೆಟ್ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಎಚ್​.ಡಿ.ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡಿದ್ದಾರೆ, ಅವರೊಬ್ಬ ರೈತನ ಮಗ: ಪ್ರತಾಪ್​ ಸಿಂಹ

https://www.vijayavani.net/dr-vishnuvardhan-v-s-vijay-rangaraju/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − ten =
Remember me
