ಬೀದರ್​:ಶಾರ್ಟ್ ಸರ್ಕ್ಯೂಟ್‌ನಿಂದ ಬಡ ರೈತನ ಕಬ್ಬು ಸುಟ್ಟು ಭಸ್ಮವಾಗಿದೆ.
ಅತಿವೃಷ್ಟಿ ಅನಾವೃಷ್ಟಿಯಿಂದ ಹೈರಾಣಾಗಿ ಹೋಗಿದ್ದ ಬಡ ರೈತ ಸಾಲ ಮಾಡಿ ಬೆಳೆದ ಕಬ್ಬು ಇದೀಗ ವಿದ್ಯುತ ಶಾರ್ಟ್ ಸರ್ಕ್ಯೂಟ್‌ನಿಂದ ಗದ್ದೆಯಲ್ಲಿ ಬೆಳೆದ ಕಬ್ಬು ಸುಟ್ಟು ಭಸ್ಮವಾದ ಘಟನೆ ಬೀದರ್ ತಾಲೂಕಿನ ಮೊಗದಾಳ ಗ್ರಾಮದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೊಗದಾಳ ಗ್ರಾಮದ ರೈತ ಚಂದ್ರಶೆಟ್ಟಿ ಅವರ ಕಬ್ಬು ಬೆಳೆ ನಾಶದಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ. ಹೀಗಾಗಿ ಬಡ ರೈತ ಕಂಗಾಲಾಗಿ ಹೋಗಿದ್ದಾರೆ.
ಒಂದು ಎಕರೆ ಪ್ರದೇಶದಲ್ಲಿ ಹುಲುಸಾಗಿ ಬೆಳೆದ ಕಬ್ಬು ಇನ್ನೇನು ಕಾರ್ಖಾನೆಗೆ ಸರಬರಾಜು ಮಾಡುವ ವ್ಯವಸ್ಥೆ ಮಾಡುತಿದ್ದ ರೈತನ ಬದುಕಿನಲ್ಲಿ ಕತ್ತಲೆ ಆವರಿಸಿದೆ. ಇಷ್ಟಾದರೂ ಜೆಸ್ಕಾಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಕಾರಣ ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ…
ವಿದ್ಯುತ್ ಸರಬರಾಜು ಕಂಪೆನಿ ಅಧಿಕಾರಿಗಳು ಮತ್ತು ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿದ್ದ ಸಂದರ್ಭ ಬೆಳೆ ನಾಶದ ಪರಿಹಾರ ಒದಗಿಸಬೇಕೆಂದು ರೈತ ಚಂದ್ರಶೆಟ್ಟಿ ಮನವಿ ಮಾಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven − 2 =
Remember me
