ತುಮಕೂರು:ಕೌಟುಂಬಿಕ ಕಲಹದಿಂದ ನೊಂದು ತಾಯಿಯೊಬ್ಬಳು ಮಗನೊಂದಿಗೆ ಕೆರೆಗೆ ಹಾರಿದ್ದು, ಮಗ ಸಾವಿಗೀಡಾಗಿ, ಅಮ್ಮ ಚಿಂತಾಜನಕ ಪರಿಸ್ಥಿತಿಗೆ ತಲುಪಿದಂತಾಗಿದೆ. ತುಮಕೂರು ಜಿಲ್ಲೆಯಲ್ಲಿ ಇಂಥದ್ದೊಂದು ಕರುಣಾಜನಕ ಪ್ರಸಂಗ ನಡೆದಿದೆ.
ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕುಣಿಗಲ್ ಕೆರೆ ಕೋಡಿ ಬಳಿ ಈ ಪ್ರಕರಣ ನಡೆದಿದೆ. ತುರುವೇಕೆರೆ ತಾಲ್ಲೂಕಿನ ಪುರ ಗ್ರಾಮದ ನಿವಾಸಿ ವಿಜಯಲಕ್ಷ್ಮಿ, ತನ್ನ ಐದು ವರ್ಷದ ಮಗ ಶಿವಕುಮಾರ್ ಸಹಿತ ಕೆರೆಗೆ ಹಾರಿದ್ದಳು. ದುರದೃಷ್ಟವಶಾತ್​ ಮಗ ಸಾವಿಗೀಡಾಗಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದರೂ ಪರಿಸ್ಥಿತಿ ಚಿಂತಾಜನಕವಾಗಿದೆ.
ಕೌಟುಂಬಿಕ ಕಲಹಕ್ಕೆ ಮನನೊಂದು ಇಂದು ಸಂಜೆ ತನ್ನ ಮಗನ ಜೊತೆ ಕುಣಿಗಲ್ ಕೆರೆಗೆ ಹಾರಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯುತ್ನಿಸಿದ್ದಳು. ಇವರು ಕೆರೆಯಲ್ಲಿ ಬಿದ್ದು ಒದ್ದಾಡುತ್ತಿದ್ದುದನ್ನು ನೋಡಿದ ಸ್ಥಳೀಯರು ರಕ್ಷಣೆಗೆ ಧಾವಿಸಿ ತಾಯಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟರಲ್ಲಿ ಮಗ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದ. ತೀವ್ರ ಅಸ್ವಸ್ಥಗೊಂಡಿದ್ದ ವಿಜಯಲಕ್ಷ್ಮೀಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಿವಕುಮಾರ್ ಮೃತದೇಹವನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಒಂದು ವರ್ಷದಲ್ಲಿ ಹಠಾತ್ ಹೃದಯಾಘಾತ, ಅನಾರೋಗ್ಯ ಶೇ. 20 ಹೆಚ್ಚಳ: ಬಾಧಿತರಲ್ಲಿ ಲಸಿಕೆ ಪಡೆದವರ ಪ್ರಮಾಣವೆಷ್ಟು?

ಹಿರಿಯ ನಟಿಯ ತಲೆಗೆ 40 ಸಲ ಬ್ಯಾಟ್​ನಿಂದ ಬಾರಿಸಿ ಕೊಲೆ; ತಾಯಿಯನ್ನು ಕೊಲ್ಲಲು ಮಗನಿಗಿತ್ತು ವರ್ಷಗಳ ಕಾಲದ ಅಸಹನೆ!

ಮೊದಲ ಪತಿಯ ಮರಣದ ಬಳಿಕ ಎರಡನೇ ಮದುವೆಯಾಗಿದ್ದಕ್ಕೆ ಸಾರ್ವಜನಿಕವಾಗಿ ಥಳಿಸಿ ತಲೆ ಬೋಳಿಸಿದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − three =
Remember me
