ಚಿಕ್ಕಬಳ್ಳಾಪುರ:ಹೆಚ್ಚು ಸಮಯ ಮೊಬೈಲ್​ ಬಳಸುವ ಬದಲು ವಿದ್ಯಾಭ್ಯಾಸದತ್ತ ಗಮನ ಹರಿಸು ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಒಂಬತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನಲ್ಲಿ ನಡೆದಿದೆ.
ಗೌರಿಬಿದನೂರು ತಾಲ್ಲೂಕಿನ ಚಿತ್ತವಾಳಹಳ್ಳಿ ಗ್ರಾಮದ ನಿವಾಸಿ ಲೋಕೇಷ್​ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ವೃತ್ತಿಯಲ್ಲಿ ರೈತರಾಗಿರುವ ಲೋಕೇಶ್​ ತಂದೆ ಹೆಚ್ಚು ಫೋನ್​ ಬಳಸದಂತೆ ತಮ್ಮ ಮಗನಿಗೆ ತಾಕೀತು ಮಾಡಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಭಾನುವಾರ ಮಧ್ಯಾಹ್ನ ಲೋಕೇಶ್​ ಪೋಷಕರು ಹೆಚ್ಚು ಸಮಯ ಮೊಬೈಲ್​ ಬಳಸುವ ಬದಲು ವಿದ್ಯಾಭ್ಯಾಸದತ್ತ ಗಮನ ಹರಿಸು ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಲೋಕೇಶ್​ ತನ್ನ ಪೋಷಕರೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದಿದ್ದಾನೆ. ಬಳಿಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + three =
Remember me
